ಮಡಿಕೇರಿ, ಜ. 15: ವಿಶ್ವ ಹಿಂದೂ ಪರಿಷತ್ ಹಾಗೂ ಭಜರಂಗದಳ ವತಿಯಿಂದ ಸಂಕ್ರಾಂತಿಪ್ರಯುಕ್ತ ಶ್ರೀ ಓಂಕಾರೇಶ್ವರ ದೇವಸ್ಥಾನದ ಗೋಶಾಲೆಯಲ್ಲಿರುವ ಗೋವುಗಳಿಗೆ ಗೋಪೂಜೆಯನ್ನು ನೆರವೇರಿಸಲಾಯಿತು. ಶ್ರೀ ಓಂಕಾರೇಶ್ವರ ದೇವಸ್ಥಾನದ ಪ್ರಧಾನ ಅರ್ಚಕ ನಾರಾಯಣ ಭಟ್ ಗೋಪೂಜೆ ನೆರವೇರಿಸಿದರು.ಈ ಸಂದರ್ಭ ವಿಶ್ವ ಹಿಂದೂ ಪರಿಷತ್ ಉಪಾಧ್ಯಕ್ಷ ಡಿ.ಹೆಚ್. ಮೇದಪ್ಪ, ಪ್ರಧಾನ ಕಾರ್ಯದರ್ಶಿ ನರಸಿಂಹ, ಕಾರ್ಯದರ್ಶಿ ಪುದಿಯೊಕ್ಕಡ ರಮೇಶ್, ಭಜರಂಗದಳ ಜಿಲ್ಲಾ ಸಹಸಂಚಾಲಕ ಚೇತನ್, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಾಂತೆಯಂಡ ರವಿಕುಶಾಲಪ್ಪ, ಪ್ರಮುಖರಾದ ರಮೇಶ್ ಸುಬ್ಬಯ್ಯ, ಸುಕುಮಾರ್, ನಂದಕುಮಾರ್, ಅರುಣ್ ಶೆಟ್ಟಿ, ಪ್ರಸನ್ನ ಭಟ್, ಗಣೇಶ್, ನಂದೀಶ್ ಕುಮಾರ್, ದೇವಸ್ಥಾನದ ಕಾರ್ಯನಿರ್ವಹಣಾಧಿಕಾರಿ ಸಂಪತ್ ಕುಮಾರ್ ಹಾಗೂ ಇನ್ನಿತರರು ಇದ್ದರು.