ವೀರಾಜಪೇಟೆ, ಜ. 15: ಜೀವನದಲ್ಲಿ ಜಿಗುಪ್ಸೆಗೊಂಡು ವೃದ್ಧೆಯೋರ್ವರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವೀರಾಜಪೇಟೆ ಗ್ರಾಮಾಂತರ ಪ್ರದೇಶ ಬಿಟ್ಟಂಗಾಲದಲ್ಲಿ ನಡೆದಿದೆ.

ಗಂಗಮ್ಮ 75 ವೃದ್ಧೆ ಅತ್ಮಹತ್ಯೆ ಮಾಡಿಕೊಂಡಿರುವ ದುರ್ದೈವಿ. ಬಾವಿಗೆ ಹಾರಿ ಗಂಗಮ್ಮ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತದೇಹವನ್ನು ಹೊರತೆಗೆದು ಮೃತ ಶರೀರವನ್ನು ಸರ್ಕಾರಿ ಅಸ್ಪತ್ರೆಯಲ್ಲಿ ವೈದ್ಯರಿಂದ ಮರಣೋತ್ತರ ಪರೀಕ್ಷೆ ಮಾಡಿಸಿ ಸಂಬಂಧಿಕರಿಗೆ ºಸ್ತಾಂತರಿಸಲಾಗಿದೆ. ಸೊಸೆ ಧನಲಕ್ಷ್ಮಿ ಅವರು ನೀಡಿದ ದೂರಿನ ಮೇರೆಗೆ ಗ್ರಾಮಾಂತರ ಪೊಲೀಸು ಠಾಣೆಯಲ್ಲಿ ಆತ್ಮಹತ್ಯೆ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.