ವೀರಾಜಪೇಟೆ, ಜ. 15: ಕರ್ನಾಟಕ ದಲಿತ ಸಂಘರ್ಷ ಸಮಿತಿ ಕೃಷ್ಣಪ್ಪ ಸ್ಥಾಪಿತ ಬಣದಿಂದ ಪರಿಶಿಷ್ಟ ಜಾತಿ ಮತ್ತ ಪರಿಶಿಷ್ಟ ವರ್ಗ ಹಾಗೂ ಹಿಂದುಳಿದ ವರ್ಗದ ಅಂತಿಮ ಪದವಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ತಾ. 21 ರಂದು ಮಡಿಕೇರಿ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಐಎಎಸ್, ಐಪಿಎಸ್, ಐಎಫ್‍ಎಸ್ ಹಾಗೂ ಕೆಎಎಸ್ ಸ್ಪರ್ಧಾತ್ಮಕ ಪರೀಕ್ಷೆಗೆ ತರಬೇತಿ ನೀಡಲಾಗುವದು ಎಂದು ದಲಿತ ಸಂಘರ್ಷ ಸಮಿತಿಯ ವಿಭಾಗೀಯ ಸಂಚಾಲಕ ಎನ್. ವೀರಭದ್ರಯ್ಯ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವೀರಭದ್ರಯ್ಯ ಅವರು, ಕೊಡಗು ಜಿಲ್ಲಾಧಿಕಾರಿ ಶ್ರೀವಿದ್ಯಾ, ಪೋಲಿಸ್ ವರಿಷ್ಠಾಧಿಕಾರಿ ರಾಜೇಂದ್ರ ಪ್ರಸಾದ್, ಅರಣ್ಯ ಸಂರಕ್ಷಣಾಧಿಕಾರಿ ಯಶ್ವಂತ್ ಅಣ್ಣಾಜಿ ಹಾಗೂ ಕೆಎಎಸ್ ಅಧಿಕಾರಿ ಲಕ್ಷ್ಮಿಚಂದ್ರಶೇಖರ್ ಅವರುಗಳು ತರಬೇತಿಯನ್ನು ನೀಡಲಿದ್ದಾರೆ. ಆಸಕ್ತ ವಿದ್ಯಾಥಿಗಳು ಜಿಲ್ಲಾ ಸಂಚಾಲಕ ಹೆಚ್.ಎಲ್. ದಿವಾಕರ್ (9481523648), ವಿಭಾಗೀಯ ಸಂಚಾಲಕ ಎನ್ ವೀರಭದ್ರಯ್ಯ (9449915621) ಇವರುಗಳಲ್ಲಿ ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬಹುದಾಗಿದೆ ಎಂದು ಹೇಳಿದರು.