ಕೂಡಿಗೆ, ಜ. 16 : ಕೂಡಿಗೆ ಗ್ರಾಮ ಪಂಚಾಯ್ತಿಯಲ್ಲಿ ಕಳೆದ ಒಂದೂವರೆ ವರ್ಷದಿಂದ ಖಾಯಂ ಅಭಿವೃದ್ಧಿ ಅಧಿಕಾರಿ ಇಲ್ಲದೆ ಮಾಸಿಕ ಸಭೆಗಳಲ್ಲಿ ಕೈಗೊಂಡ ನಿರ್ಣಯಗಳು ಪ್ರಗತಿಯತ್ತ ಸಾಗುತ್ತಿಲ್ಲ.
ಅಲ್ಲದೆ, ಯಾವದೇ ಕಾಮಗಾರಿಗಳನ್ನು ಯೋಜಿತ ರೀತಿಯಲ್ಲಿ ಕೈಗೊಳ್ಳಲು ಆಗುತ್ತಿಲ್ಲ. ಗ್ರಾಮ ಪಂಚಾಯ್ತಿ ವ್ಯಾಪ್ತಿಯ ವಾರ್ಡುಗಳಿಗೆ ಮೂಲಭೂತ ಸೌಕರ್ಯಗಳನ್ನು ತುರ್ತಾಗಿ ಒದಗಿಸಲು ಸಾಧ್ಯವಾಗುತ್ತಿಲ್ಲ. ಈಗಾಗಲೇ ಬೇಸಿಗೆ ಪ್ರಾರಂಭವಾಗಿದ್ದು, ಸೀಗೆಹೊಸೂರು ವ್ಯಾಪ್ತಿಯಲ್ಲಿ ನೀರಿನ ಬವಣೆ ಕೂಡಿಗೆ, ಜ. 16 : ಕೂಡಿಗೆ ಗ್ರಾಮ ಪಂಚಾಯ್ತಿಯಲ್ಲಿ ಕಳೆದ ಒಂದೂವರೆ ವರ್ಷದಿಂದ ಖಾಯಂ ಅಭಿವೃದ್ಧಿ ಅಧಿಕಾರಿ ಇಲ್ಲದೆ ಮಾಸಿಕ ಸಭೆಗಳಲ್ಲಿ ಕೈಗೊಂಡ ನಿರ್ಣಯಗಳು ಪ್ರಗತಿಯತ್ತ ಸಾಗುತ್ತಿಲ್ಲ.
ಹೆಚ್ಚಾಗಿದೆ. ಅವುಗಳಿಗೆ ಉಪಪೈಪ್‍ಗಳ ಕಾಮಗಾರಿಗಳನ್ನು ಕೈಗೊಳ್ಳಲು ಆಗುತ್ತಿಲ್ಲ.
ಈ ಹಿನ್ನೆಲೆಯಲ್ಲಿ ತಕ್ಷಣ ಖಾಯಂ ಅಭಿವೃದ್ಧಿ ಅಧಿಕಾರಿಯನ್ನು ನೇಮಕ ಮಾಡಬೇಕೆಂದು ಗ್ರಾಮ ಪಂಚಾಯ್ತಿ ಸದಸ್ಯರಾದ ಕೆ. ವೈ. ರವಿ, ರಾಮಚಂದ್ರ, ಹೆಚ್. ಎಸ್. ರವಿ ಆಗ್ರಹಿಸಿದ್ದಾರೆ. ಮಕ್ಕಳ ಗ್ರಾಮ ಸಭೆಯನ್ನು ಖಾಯಂ ಅಧಿಕಾರಿಯನ್ನು ನೇಮಕ ಮಾಡದೆ ನಡೆಸಬಾರದೆಂದು ಗ್ರಾಮ ಪಂಚಾಯಿತಿ ಮಾಸಿಕ ಸಭೆಯಲ್ಲಿ ಅಧ್ಯಕ್ಷರೊನ್ನಳಗೊಂಡಂತೆ ಸದಸ್ಯರು ತೀರ್ಮಾನ ಕೈಗೊಂಡಿದ್ದಾರೆ.