ನಾಪೆÇೀಕ್ಲು, ಜ. 16: ಗ್ರಾಮೀಣ ಕ್ರೀಡಾಕೂಟಗಳು ಪರಸ್ಪರ ಸ್ನೇಹ, ಸಾಮರಸ್ಯ ವೃದ್ಧಿಸಲು ಕಾರಣವಾಗ ಲಿದೆ ಎಂದು ಮಾಜಿ ಮಂತ್ರಿ ಜೀವಿಜಯ ಅಭಿಪ್ರಾಯಪಟ್ಟರು.
ಹೊದವಾಡ ಗ್ರಾಮದ ಓಯಸಿಸ್ ಆಟ್ರ್ಸ್ ಅಂಡ್ ಸ್ಪೋಟ್ರ್ಸ್ ಕ್ಲಬ್ ವತಿಯಿಂದ ಅಯೋಜಿಸಲಾಗಿದ್ದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿ ಉದ್ಘಾಟಿಸಿ ಮಾತನಾಡಿದರು.
ಜಿಲ್ಲೆಯ ಕ್ರೀಡಾಪಟುಗಳು ಹಾಕಿ, ಕ್ರಿಕೆಟ್, ಟೆನ್ನಿಸ್ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಅಂತರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿಗಳಿಸಿದ್ದಾರೆ. ಜೆಡಿಎಸ್ ಅಧಿಕಾರಕ್ಕೆ ಬಂದರೆ ಗ್ರಾಮೀಣ ಕ್ರೀಡಾಪಟುಗಳಿಗೆ ಹೆಚ್ಚಿನ ಸೌಲಭ್ಯ ನೀಡಲು ಕ್ರಮಕೈಗೊಳ್ಳಲಾಗುವದು ಎಂದರು.
ಮುಖ್ಯ ಅಥಿತಿಯಾಗಿ ಆಗಮಿಸಿದ ಜಿಲ್ಲಾ ಜೆಡಿಎಸ್ ಅಧ್ಯಕ್ಷ ಮೇರಿಯಂಡ ಸಂಕೇತ್ ಪೂವಯ್ಯ ಮಾತನಾಡಿ ಜಿಲ್ಲೆಯ ಜನತೆ ಸಂಸ್ಕøತಿ, ಆಚಾರ, ವಿಚಾರಕ್ಕೆ ಹೆಚ್ಚಿನ ಆದÀ್ಯತೆ ನೀಡುವಂತೆ ಕ್ರೀಡೆಗಳಿಗೆ ಪೆÇ್ರೀತ್ಸಾಹ ಮತ್ತು ಉತ್ತೇಜನ ನೀಡುತ್ತಾರೆ. ಆದರೆ ಸರಕಾರ ಈ ನಿಟ್ಟಿನಲ್ಲಿ ಯಾವದೇ ಪೆÇ್ರೀತ್ಸಾಹ ನೀಡುತ್ತಿಲ್ಲ. ಗ್ರಾಮೀಣ ಪ್ರತಿಭೆಗಳಿಗೆ ಹೆಚ್ಚಿನ ಸೌಲಭ್ಯ ನೀಡಿದ್ದಲ್ಲಿ ಅವರು ಕ್ರೀಡೆಯಲ್ಲಿ ಉನ್ನತ ಸಾಧನೆ ಮಾಡಲು ಸಾಧ್ಯ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕ್ಲಬ್ ಅಧ್ಯಕ್ಷ ಫೈಜಲ್ ವಹಿಸಿದ್ದರು. ವೇದಿಕೆಯಲ್ಲಿ ರಾಜ್ಯ ಜೆಡಿಎಸ್ ಸಂಘಟನಾ ಕಾರ್ಯದರ್ಶಿ ಎಂ.ಎ. ಮನ್ಸೂರ್ ಅಲಿ, ಜೈನೂಲ್ ಅಭಿದು, ಮಹಮ್ಮದ್, ಹಸನ್ ಮತ್ತಿತರರು ಇದ್ದರು.