ಮಡಿಕೇರಿ ಜ. 16: ಹೊದ್ದೂರು ಗ್ರಾಮದ ವಾಟೆಕಾಡುವಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ದಶಮಾನೋತ್ಸವ ಸಮಾರಂಭದಲ್ಲಿ ಪಾಲ್ಗೊಳ್ಳಲು ತಮ್ಮನ್ನು ಆಹ್ವಾನಿಸದೆ ಕಡೆಗಣಿಸಲಾಗಿದೆ ಎಂದು ಗ್ರಾ.ಪಂ. ಉಪಾಧ್ಯಕ್ಷೆ ಪಿ.ಎ. ಕುಸುಮಾವತಿ ಆರೋಪಿಸಿದ್ದಾರೆ.

ಶಾಲೆಯ ಮುಖ್ಯ ಶಿಕ್ಷಕರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಸಾರ್ವಜನಿಕ ಶಿಕ್ಷಣ ಇಲಾಖೆ ಸಹಾಯಕ ನಿರ್ದೇಶಕರಿಗೆ ದೂರು ನೀಡುವದಾಗಿ ಅವರು ತಿಳಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕುಸುಮಾವತಿ

ಸಮಾರಂಭಕ್ಕೆ ಮುಖ್ಯ ಅತಿಥಿಗಳಾಗಿ ಗ್ರಾಮ ಪಂಚಾಯಿತಿಯ ಕೆಲವು ಸದಸ್ಯರನ್ನು ಆಹ್ವಾನಿಸಿದ್ದಾರೆ.

ಆದರೆ ತಾನು ಪರಿಶಿಷ್ಟ ಜಾತಿಗೆ ಸೇರಿದ ಮಹಿಳೆ ಎನ್ನುವ ಕಾರಣಕ್ಕಾಗಿ ಮತ್ತು ಗ್ರಾಮ ಪಂಚಾಯಿತಿಯಲ್ಲಿ ಬಿಜೆಪಿ ಬೆಂಬಲಿತ ಆಡಳಿತ ಇರುವ ಹಿನ್ನೆಲೆಯಲ್ಲಿ ನನ್ನನ್ನು ನಿರ್ಲಕ್ಷಿಸಿದ್ದಾರೆ ಎಂದು ಆರೋಪಿಸಿದರು.

ಸುದ್ದಿಗೋಷ್ಠಿಯಲ್ಲಿ ಬಹುಜನ ಕಾರ್ಮಿಕ ಸಂಘದ ಅಧ್ಯಕ್ಷ ಕೆ.ಮೊಣಪ್ಪ, ಹಾಗೂ ಜಿಲ್ಲಾ ಕಾರ್ಯದರ್ಶಿ ಎಂ.ಎಸ್.ಆನಂದ್ ಉಪಸ್ಥಿತರಿದ್ದರು.