ಗೋಣಿಕೊಪ್ಪಲು, ಜ. 17: ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಮತ್ತು ಬಾಳೆಲೆ ವಿಜಯಲಕ್ಷ್ಮಿ ಸಂಯುಕ್ತ ಪದವಿಪೂರ್ವ ಕಾಲೇಜು ಸಂಯುಕ್ತ ಆಶ್ರಯದಲ್ಲಿ ತಾ. 18 ರಂದು ಕ.ಸಾ.ಪ. ಅಧ್ಯಕ್ಷ ಮುಲ್ಲೇಂಗಡ ಮದೋಷ್ ಪೂವಯ್ಯ ಅಧ್ಯಕ್ಷತೆಯಲ್ಲಿ ಮಂಡೇಪಂಡ ಅಕ್ಕಮ್ಮ ಗಣಪತಿ ಸ್ಮಾರಕ ದತ್ತಿ ಉಪನ್ಯಾಸ ಕಾರ್ಯಕ್ರಮ ನಡೆಯಲಿದೆ ಎಂದು ತಾಲೂಕು. ಕ.ಸಾ.ಪ. ಪ್ರಧಾನ ಕಾರ್ಯದರ್ಶಿ ಚಮ್ಮಟಿರ ಪ್ರವೀಣ ಉತ್ತಪ್ಪ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಮದ್ಯಾಹ್ನ 1.30ಕ್ಕೆ ಕಾಲೇಜು ಸಭಾಂಗಣದಲ್ಲಿ ಕೊಡವ ಸಂಸ್ಕøತಿ ಮಹಿಳೆ ಮತ್ತು ಸಾಹಿತ್ಯ ವಿಚಾರವಾಗಿ ನಿವೃತ ಶಿಕ್ಷಕಿ ಮುಲ್ಲೇಂಗಡ ಬೇಬಿ ಚೊಂದಮ್ಮ ಮತ್ತು ಫೀಲ್ಡ್ ಮಾರ್ಷಲ್ ಕಾರ್ಯಪ್ಪ - ಜನರಲ್ ತಿಮ್ಮಯ್ಯ ವಿಷಯವಾಗಿ ಕಾವೇರಿ ಕಾಲೇಜು ಉಪನ್ಯಾಸಕಿ ಕಾಲೇಂಗಡ ಧಮಯಂತಿ ಉಪನ್ಯಾಸ ನೀಡಲಿದ್ದಾರೆ.

ಉದ್ಘಾಟನೆಯನ್ನು ಕ.ಸಾ.ಪ. ಜಿಲ್ಲಾಧ್ಯಕ್ಷ ಲೊಕೇಶ್ ಸಾಗರ್ ನೆರವೇರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಬಾಳೆಲೆ ಸೆಂಟ್ರಲ್ ಎಜುಕೇಶನ್ ಸೊಸೈಟಿ ಅಧ್ಯಕ್ಷ ಅಳಮೇಂಗಡ ಬೋಸ್ ಮಂದಣ್ಣ, ಕಾರ್ಯದರ್ಶಿ ಚಿಮ್ಮಣಮಾಡ ಕೃಷ್ಣ ಗಣಪತಿ, ವಿಜಯಲಕ್ಷ್ಮಿ ಪದವಿಪೂರ್ವ ಕಾಲೇಜು ಪ್ರಾಂಶುಪಾಲೆ ಕಾಡ್ಯಮಾಡ ಪೊನ್ನಮ್ಮ, ಪ್ರೌಢಶಾಲೆ ವಿಭಾಗದ ಸಹಾಯಕ ಪ್ರಾಧ್ಯಾಪಕ ಚಂದ್ರಶೇಖರ್ ಮತ್ತು ವಿಶೇಷ ಆಹ್ವಾನಿತರಾಗಿ ತಾಲೂಕು ಕ.ಸಾ.ಪ. ನಿರ್ದೇಶಕರುಗಳಾದ ನಳಿನಾಕ್ಷಿ, ಟೋಮಿ ಥಾಮಸ್, ವೈಲೇಶ್ ಉಪಸ್ಥಿತರಿರುವರು ಎಂದು ತಿಳಿಸಿದರು.

ಗೋಷ್ಠಿಯಲ್ಲಿ ತಾಲೂಕು. ಕ.ಸಾ.ಪ. ಕಾರ್ಯದರ್ಶಿ ರೇಖಾ ಶ್ರೀಧರ್, ಮಾಧ್ಯಮ ಕಾರ್ಯದರ್ಶಿ ಜಗದೀಶ್ ಜೋಡುಬೀಟಿ ಉಪಸ್ಥಿತರಿದ್ದರು.