ಮಡಿಕೇರಿ, ಜ. 16: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ 33ನೇ ರಾಜ್ಯ ಸಮ್ಮೇಳನವು ಹಾಸನ ಜಿಲ್ಲೆಯ ಶ್ರವಣಬೆಳಗೊಳದಲ್ಲಿ ತಾ. 20 ಮತ್ತು 21 ರಂದು ನಡೆಯಲಿದೆ. ಜಗದ್ಗುರು ಕರ್ಮಯೋಗಿ ಸ್ವಸ್ತಿ ಚಾರುಕೀರ್ತಿ ಭಟ್ಟಾರಕ ಸ್ವಾಮೀಜಿ ಅವರ ಸಾನ್ನಿಧ್ಯದಲ್ಲಿ ನಡೆಯಲಿರುವ ಸಮ್ಮೇಳನದ ಉದ್ಘಾಟನೆಯನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ನೆರವೇರಿಸಲಿದ್ದಾರೆ. ಬೆಳಿಗ್ಗೆÀ 10 ಗಂಟೆಗೆ ಸಮ್ಮೇಳನದ ಉದ್ಘಾಟನೆ ನಡೆಯಲಿದ್ದು, ರಾಜ್ಯದ ಸಚಿವರು, ಹಿರಿಯ ಚಿಂತಕರು ಹಾಗೂ ಹಿರಿಯ ಪತ್ರಕರ್ತರು ಭಾಗವಹಿಸಲಿದ್ದಾರೆ. ಸಂಜೆ 4 ಗಂಟೆಗೆ ಭಟ್ಟಾರಕ ಸ್ವಾಮೀಜಿ ಅವರ ಆಶೀರ್ವಾದದೊಂದಿಗೆ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ.

22 ರಂದು ಗೋಮಟೇಶ್ವರ ಭಗವಾನ್ ಬಾಹುಬಲಿಯ ದರ್ಶನ ಕಾರ್ಯಕ್ರಮವಿರುತ್ತದೆ ಎಂದು ಕೊಡಗು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಕುಡೆಕಲ್ ಸಂತೋಷ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.