ಸೋಮವಾರಪೇಟೆ, ಜ. 16: ವಿಷ ಸೇವಿಸಿ ಕೃಷಿಕರೋರ್ವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸಮೀಪದ ನೇರುಗಳಲೆ ಗ್ರಾಮದಲ್ಲಿ ನಡೆದಿದೆ.

ನೇರುಗಳಲೆ ಗ್ರಾಮದ ರುಕ್ಮಿಣಿ ಅವರ ಪತಿ ಸುರೇಶ್ (50) ಎಂಬವರು ಕಳೆದ ತಾ. 11ರಂದು ತಮ್ಮ ಮನೆಯಲ್ಲಿ ವಿಷ ಸೇವಿಸಿ ಅಸ್ವಸ್ಥರಾಗಿದ್ದು, ತಕ್ಷಣ ಮೈಸೂರಿನ ಜೆಎಸ್‍ಎಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸುರೇಶ್ ಅವರು ತಾ. 15ರಂದು ನಿಧನರಾದರು. ಮೃತರು ಪತ್ನಿ, ಈರ್ವರು ಪುತ್ರಿಯರನ್ನು ಅಗಲಿದ್ದಾರೆ.