ಕುಶಾಲನಗರ, ಜ. 17: ತಾವರೆಕೆರೆ ಅಭಿವೃದ್ಧಿಗೊಳಿಸುವ ನಿಟ್ಟಿನಲ್ಲಿ ಕ್ಯಾಡ್ ಫೋರಂ ಖಾಸಗಿ ಸಂಸ್ಥೆಯ ಅಧಿಕಾರಿಗಳ ತಂಡ ಸ್ಥಳಕ್ಕೆ ಭೇಟಿ ನೀಡಿ ಪಂಚಾಯಿತಿ ಅಧಿಕಾರಿಗಳಿಂದ ಮಾಹಿತಿ ಸಂಗ್ರಹ ಮಾಡಿತು. ಕೆರೆಯನ್ನು ಅಂದಾಜು ರೂ. 1 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಗೊಳಿಸಲು ಸ್ಥಳೀಯ ಆಡಳಿತ ಯೋಜನೆ ರೂಪಿಸಿದ್ದು ಕುಡಾ ಮತ್ತು ಪ್ರವಾಸೋದ್ಯಮ ಇಲಾಖೆ ಯೋಜನೆಗೆ ಅನುದಾನ ಕಲ್ಪಿಸಲಿದೆ ಎಂದು ತಿಳಿಸಿರುವ ಮುಖ್ಯಾಧಿಕಾರಿ ಎ.ಎಂ. ಶ್ರೀಧರ್, ಪಂಚಾಯಿತಿ ಇದರ ನಿರ್ವಹಣೆ ಮಾಡಲಿದೆ ಎಂದು ಮಾಹಿತಿ ಒದಗಿಸಿದರು.

ಸಂಸ್ಥೆಯ ಅಧಿಕಾರಿಗಳ ತಂಡ ಕೆರೆಯ ಅಭಿವೃದ್ಧಿ ಯೋಜನೆ, ಪ್ರವಾಸಿಗರಿಗೆ ಅನುಕೂಲ ಹಾಗೂ ಕೆರೆಯ ಸೌಂದರ್ಯ ಹೆಚ್ಚಿಸುವ ನಿಟ್ಟಿನಲ್ಲಿ ರೂಪುರೇಷೆ ಸಿದ್ಧಗೊಳಿಸಲು ಮಾಹಿತಿ ಸಂಗ್ರಹಿಸಿತು.

ಈ ಸಂದರ್ಭ ಉಪಸ್ಥಿತರಿದ್ದ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ರೇಣುಕಾ ಜಿಲ್ಲೆಯ ಪ್ರವಾಸೋದ್ಯಮಕ್ಕೆ ಪಟ್ಟಣದ ತಾವರೆಕೆರೆ ಒಂದು ಕೇಂದ್ರ ಬಿಂದುವಾಗಿ ಪರಿವರ್ತಿಸುವಲ್ಲಿ ತಮ್ಮ ಆಡಳಿತ ಮಂಡಳಿ ಎಲ್ಲಾ ರೀತಿಯ ಸಹಕಾರ ನೀಡಲಿದೆ ಎಂದು ತಿಳಿಸಿದರು.