ಕೂಡಿಗೆ, ಜ. 16 : ಕೂಡಿಗೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ನೂತನವಾಗಿ ನಿರ್ಮಾಣಗೊಂಡಿದ್ದ ಶುದ್ಧ ಕುಡಿಯುವ ನೀರಿನ ಘಟಕವನ್ನು ಮಡಿಕೇರಿ ಕ್ಷೇತ್ರದ ಶಾಸಕರಾದ ಎಂ.ಪಿ. ಅಪ್ಪಚ್ಚುರಂಜನ್ ಅವರು ಉದ್ಘಾಟಿಸಿದರು. ಈ ಸಂದರ್ಭ ಜಿಲ್ಲಾ ಪಂಚಾಯ್ತಿ ಸದಸ್ಯೆ ಮಂಜುಳಾ, ತಾಲೂಕು ಪಂಚಾಯ್ತಿ ಸದಸ್ಯ ಗಣೇಶ್, ಕೂಡಿಗೆ ಗ್ರಾ.ಪಂ ಅಧ್ಯಕ್ಷೆ ಪ್ರೇಮಲೀಲಾ, ಉಪಾಧ್ಯಕ್ಷ ಕೆ.ಟಿ.ಗಿರೀಶ್, ಸದಸ್ಯರಾದ ಕೆ.ಜಿ.ಮೋಹಿನಿ, ಕೆ.ಟಿ.ಈರಯ್ಯ, ರತ್ನಮ್ಮ, ರಾಮಚಂದ್ರ, ತಾಲ್ಲೂಕು ಬಿಜೆಪಿ ಅಧ್ಯಕ್ಷ ಕೆ.ಕೆ.ಭೋಗಪ್ಪ, ಆರ್‍ಎಂಸಿ ಮಾಜಿ ಅಧ್ಯಕ್ಷ ಎಂ.ಬಿ.ಜಯಂತ್, ಗ್ರಾ.ಪಂ ಮಾಜಿ ಸದಸ್ಯ ಕುಮಾರಸ್ವಾಮಿ, ಆರ್.ಕೆ.ಕೃಷ್ಣ, ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ಸ್ವಾಮಿ ನಾಯಕ್ ಮತ್ತಿತರರು ಇದ್ದರು.