ಮಡಿಕೇರಿ, ಜ.17 : ಪÀÅತ್ತೂರಿನ ಅನಂತÀರಾಜ ಗೌಡ ರಚಿಸಿರುವ “ರಾಜ ಪರಂಪರೆಯ ಕೊಡಗು ಮತ್ತು ದಕ್ಷಿಣ ಕನ್ನಡ ಗೌಡ”ರು ಕೃತಿಯ ಲೋಕಾರ್ಪಣೆ ಸಮಾರಂಭ ಬೆಂಗಳೂರಿನ ಚಾಮರಾಜಪೇಟೆಯಲ್ಲಿ ತಾ. 22 ರಂದು ನಡೆಯಲಿದೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಾಹಿತಿ ಹಾಗೂ ಚಿಂತಕ ಕುಡೆಕಲ್ ವಿದ್ಯಾಧರ್, ವಿಶ್ವ ಒಕ್ಕಲಿಗ ಮಹಾವೇದಿಕೆಯ ಸಹಯೋಗ ದೊಂದಿಗೆ ಕೊಡಗು ಮತ್ತು ದಕ್ಷಿಣ ಕನ್ನಡ ಗೌಡ ಸಮಾಜಗಳ ಸಂಯುಕ್ತಾಶ್ರಯದಲ್ಲಿ ನಡೆಯುವ ಕಾರ್ಯಕ್ರಮದ ಕುರಿತು ಮಾಹಿತಿ ನೀಡಿದರು. ತಾ. 22 ರಂದು ಸಂಜೆ 6 ಗಂಟೆಗೆ ಚಾಮರಾಜಪೇಟೆಯ ಶ್ರೀಕೃಷ್ಣರಾಜ ಪರಿಷನ್ಮಂದಿರದಲ್ಲಿ ಶ್ರೀಆದಿಚುಂಚನಗಿರಿ ಮಹಾಸಂಸ್ಥಾನದ ಪೀಠಾಧ್ಯಕ್ಷ ಡಾ. ನಿರ್ಮಲಾನಂದನಾಥ ಮಹಾ ಸ್ವಾಮೀಜಿಗಳು ಸಮಾರಂಭವನ್ನು ಉದ್ಘಾಟಿಸಲಿದ್ದಾರೆ ಎಂದರು.

ಮುಖ್ಯ ಅತಿಥಿಗಳಾಗಿ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ, ಹಿರಿಯ ಸಾಹಿತಿ ಡಾ. ದೊಡ್ಡರಂಗೇಗೌಡ, ರಾಜ್ಯ ಒಕ್ಕಲಿಗರ ಸಂಘದ ಅಧ್ಯಕ್ಷ ಬೆಟ್ಟೇಗೌಡ, ಸಾಹಿತಿ ಪುರುಷೋತ್ತಮ ಬಿಳಿಮಲೆ, ಅತಿಥಿಗಳಾಗಿ ಹಿರಿಯ ವಕೀಲ ವಿವೇಕ್ ಸುಬ್ಬಾರೆಡ್ಡಿ, ಉದ್ಯಮಿ ಎಂ. ಶಶಿ ಕುಮಾರ್, ಕೊಡಗು ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷ ಸೂರ್ತಲೆ ಸೋಮಣ್ಣ, ನಾಡ ಪ್ರಭು ರಾಜ್ಯ ಒಕ್ಕಲಿಗರ ಸಂಘದ ಕಾರ್ಯಾಧ್ಯಕ್ಷ ಜೆ. ನಾಗರಾಜ, ಕೊಡಗು ಮತ್ತು ದಕ್ಷಿಣ ಕನ್ನಡ ಗೌಡ ಸಮಾಜಗಳ ಅಧ್ಯಕ್ಷ ತೇನನ ರಾಜೇಶ್ ಸೋಮಣ್ಣ, ಸಾಹಿತಿ ತಲಕಾಡು ಚಿಕ್ಕರಂಗೇಗೌಡ ಮತ್ತು ಉಪನ್ಯಾಸಕ ಪಟ್ಟಡ ಶಿವಕುಮಾರ್ ಕೃತಿಯ ಕುರಿತು ಮಾತನಾಡಲಿದ್ದಾರೆ ಎಂದು ವಿದ್ಯಾಧರ್ ಮಾಹಿತಿ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿಶ್ವ ಒಕ್ಕಲಿಗರ ಮಹಾವೇದಿಕೆಯ ರಾಷ್ಟ್ರಾಧ್ಯಕ ವೈ.ಡಿ. ರವಿಶಂಕರ್ ವಹಿಸಲಿದ್ದಾರೆ.

ಕೃತಿ ರಚನೆಕಾರ ಅನಂತರಾಜ ಗೌಡ ಪುತ್ತೂರು ಮಾತನಾಡಿ, ಕರ್ನಾಟಕ ಹಾಗೂ ಈಗಿನ ಉತ್ತರ ತಮಿಳುನಾಡಿನ ಎಲ್ಲಾ ಗೌಡ ಮತ್ತು ಒಕ್ಕಲಿಗ ಸಮುದಾಯಗಳು ಕ್ರಿ.ಶ. 200 ರಿಂದ 1004ರವರೆಗೆ ಈ ಪ್ರದೇಶವನ್ನಾಳಿದ ತಲಕಾಡು ಗಂಗರಸರ ಕಾಲದಿಂದ ಬಂದವರಾಗಿದ್ದಾರೆ ಎಂದರು.

ಗೌಡ ಒಕ್ಕೂಟದ ನಿರ್ದೇಶಕ ಆನಂದ ಕರಂದ್ಲಾಜೆ ಮಾತನಾಡಿ, ಈ ಸಂಶೋಧನಾ ಪುಸ್ತಕವು ಮುಂದಿನ ಪೀಳಿಗೆಗೆ ಮಾದರಿಯಾಗಿದ್ದು, ಕೃತಿಯ ಕುರಿತು ಸಂವಾದ ಕಾರ್ಯಕ್ರಮವನ್ನು ಕೊಡಗಿನಲ್ಲಿ ನಡೆಸಲಾಗುವದೆಂದರು.

ಸುದ್ದಿಗೋಷ್ಠಿಯಲ್ಲಿ ಕೊಡಗು ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷ ಸೂರ್ತಲೆ ಸೋಮಣ್ಣ, ಕೊಡಗು ಗೌಡ ಯುವ ವೇದಿಕೆ ಅಧ್ಯಕ್ಷ ಪೈಕೇರ ಮನೋಹರ್ ಮಾದಪ್ಪ ಹಾಗೂ ಮಡಿಕೇರಿ ಗೌಡ ಸಮಾಜದ ಅಧ್ಯಕ್ಷ ಪೇರಿಯನ ಜಯಾನಂದ ಉಪಸ್ಥಿತರಿದ್ದರು.