ನಾಪೋಕ್ಲು, ಜ. 16 : ಶಿಕ್ಷಕರ ಉತ್ತಮ ಮಾರ್ಗದರ್ಶನದಿಂದ ಮಕ್ಕಳು ಸಂಸ್ಕಾರವಂತರಾಗುತ್ತಾರೆ ಎಂದು ಪುಲಿಕೋಟು ಗ್ರಾಮದ ಕಾಫಿ ಬೆಳೆಗಾರ ಕರವಂಡ ಲವ ನಾಣಯ್ಯ ಹೇಳಿದರು. ನಾಪೋಕ್ಲು ಕೊಡವ ಸಮಾಜದಲ್ಲಿ ನಡೆದ ಎಕ್ಸೆಲ್ ವಿದ್ಯಾ ಸಂಸ್ಥೆಯ ವಾರ್ಷಿಕೋತ್ಸವ ಸಮಾರಂಭ ವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಶಾಲೆಯ ಅಭಿವೃದ್ದಿಗಾಗಿ ರೂ.20 ಸಾವಿರ ಮೊತ್ತದ ಚೆಕ್‍ಅನ್ನು ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಎಕ್ಸೆಲ್ ಸ್ಕೂಲ್ ಆಫ್ ಎಜುಕೇಶನ್ ಆಡಳಿತ ಮಂಡಳಿ ಅಧ್ಯಕ್ಷ ಕುಟ್ಟಂಜೆಟ್ಟೀರ ಮಾದಪ್ಪ ಅವರಿಗೆ ವಿತರಿಸಿದರು. ಆಡಳಿತ ಮಂಡಳಿ ಸದಸ್ಯರು ಶಿಕ್ಷಕ ವೃಂದ ಉಪಸ್ಥಿತರಿದ್ದರು. ವಾರ್ಷಿಕೋತ್ಸವದ ಅಂಗವಾಗಿ ಏರ್ಪಡಿಸಲಾಗಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಗಣ್ಯರು ಬಹುಮಾನ ವಿತರಿಸಿದರು. ಶಿಕ್ಷಕಿ ಶರೀನಾ ಸ್ವಾಗತಿಸಿ, ಸಂಧ್ಯಾ, ಅಂಬಿಕ ನಿರೂಪಿಸಿದರೆ, ರೆಹನಾ ವಂದಿಸಿದರು.