ಮಡಿಕೇರಿ, ಜ. 16 : ಸ್ವಾಮಿ ವಿವೇಕಾನಂದರು ಸಾಮಾಜಿಕ ಸಮಸ್ಯೆಗಳ ಬಗ್ಗೆ ಬೆಳಕು ಚೆಲ್ಲಿದ ಮಹಾನ್ ತತ್ವಜ್ಞಾನಿ ಎಂದು ವಿಧಾನ ಪರಿಷತ್ ಸದಸ್ಯ ಎಂ.ಪಿ. ಸುನಿಲ್ ಸುಬ್ರಮಣಿ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಪದವಿಪೂರ್ವ ಶಿಕ್ಷಣ ಹಾಗೂ ಉನ್ನತ ಶಿಕ್ಷಣ ಇಲಾಖೆ ವತಿಯಿಂದ ನಗರದ ಕಾವೇರಿ ಕಲಾಕ್ಷೇತ್ರದಲ್ಲಿ ನಡೆದ ಸ್ವಾಮಿ ವಿವೇಕಾನಂದರ ಜಯಂತ್ಯುತ್ಸವಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಸ್ವಾಮಿ ವಿವೇಕಾನಂದರು ಮಹಾನ್ ದಾರ್ಶನಿಕ. ದೇಶಭಕ್ತಿ ಉಳ್ಳವರಾಗಿದ್ದರು. ಇವರ ಆದರ್ಶಗಳು ಬದುಕಿನ ಬಗ್ಗೆ ಯುವಜನರು ತಿಳಿದುಕೊಳ್ಳಬೇಕು ಎಂದರು.

ಯುವ ಜನತೆ ದೇಶದ ಭವಿಷ್ಯ ನಿರ್ಮಾಪಕರು, ಯುವ ಜನರಲ್ಲಿನ ಸುಪ್ತ ಪ್ರತಿಭೆ ಹಾಗೂ ಶಕ್ತಿಯನ್ನು ಸೂಕ್ತ ರೀತಿಯಲ್ಲಿ ಬಳಸಿಕೊಂಡಲ್ಲಿ ಬಲಿಷ್ಠ ರಾಷ್ಟ್ರ ನಿರ್ಮಾಣ ಸಾಧ್ಯ. ಆ ದಿಸೆಯಲ್ಲಿ ಸ್ವಾಮಿ ವಿವೇಕಾನಂದರು ತಮ್ಮ ಕನಸಿನ ಭಾರತ ನಿರ್ಮಾಣದಲ್ಲಿ ಯುವ ಶಕ್ತಿಯ ಪಾತ್ರವನ್ನು ಅತ್ಯಂತ ಪ್ರಭಾವಯುತವಾಗಿ ಬಿಂಭಿಸಿದರು. ಯುವ ಜನತೆಗೆ ಸ್ವಾಮಿ ವಿವೇಕಾನಂದರೇ ಬಹುದೊಡ್ಡ ಸ್ಫೂರ್ತಿ ಹಾಗೂ ಆದರ್ಶ ಎಂದು ಸುನಿಲ್ ಸುಬ್ರಮಣಿ ಅವರು ಹೇಳಿದರು. ನಗರಸಭೆ ಅಧ್ಯಕ್ಷೆ ಕಾವೇರಮ್ಮ ಸೋಮಣ್ಣ ಮಾತನಾಡಿ, ಮಹಾನ್ ಚೇತನ ಸ್ವಾಮಿ ವಿವೇಕಾನಂದರ ಚಿಕಾಗೋದಲ್ಲಿನ ಭಾಷಣ ಮತ್ತು ಅವರು ನೀಡಿದ ಸಂದೇಶಗಳು ಸದಾ ಸ್ಮರಣೀಯ.

ಸ್ವಾಮಿ ವಿವೇಕಾನಂದರ ವ್ಯಕ್ತಿತ್ವ ದೊಡ್ಡದು, ಸಿದ್ಧಾಂತ ವಿಶಾಲವಾದದ್ದು, ಪ್ರತಿಯೊಬ್ಬರು ಸಹೋದರತೆ, ಸಮನ್ವಯತೆ, ಸಮಗ್ರತೆ ಹಾಗೂ ಭಾತೃತ್ವದಿಂದ ಬದುಕು ನಡೆಸಬೇಕು ಎಂದು ಸಾರಿದ್ದರು ಎಂದು ಹೇಳಿದರು.

ಜಿಲ್ಲಾಧಿಕಾರಿ ಪಿ.ಐ. ಶ್ರೀವಿದ್ಯಾ ಮಾತನಾಡಿ, ರಾಷ್ಟ್ರದ ಸಂಸ್ಕøತಿಯನ್ನು ವಿದೇಶಗಳಿಗೆ ಪರಿಚಯಿಸಿದ ಕೀರ್ತಿ ಸ್ವಾಮಿ ವಿವೇಕಾನಂದ ಅವರಿಗೆ ಸಲ್ಲುತ್ತದೆ.

ಯುವಜನ ಉತ್ಸವವಾಗಿ ಸ್ವಾಮಿ ವಿವೇಕಾನಂದರ ಜಯಂತಿ ಆಚರಿಸ ಬೇಕಿದೆ ಎಂದರು. ಯುವಜನರಿಗೆ ಸ್ವಾಮಿ ವಿವೇಕಾನಂದ ಅವರು ಮಾದರಿ, ಯುವಜನರಲ್ಲಿ ಕನಸು ಇದ್ದಾಗ, ಅಭಿವೃದ್ಧಿ ಸಾಧಿಸಬಹುದು ಎಂದು ಅಭಿಪ್ರಾಯ ವ್ಯಕ್ತಪಡಿಸಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ. ರಾಜೇಂದ್ರ ಪ್ರಸಾದ್ ಮಾತನಾಡಿ, ಸ್ವಾಮಿ ವಿವೇಕಾನಂದ ಜಯಂತಿಯನ್ನು ಯುವ ಜನರ ದಿನಾಚರಣೆಯಾಗಿ ಆಚರಿಸಲಾಗುತ್ತಿದೆ. ಯುವಜನರು ಬಲಿಷ್ಠ ರಾಷ್ಟ್ರ ನಿರ್ಮಾಣಕ್ಕೆ ಕೈಜೋಡಿಸಬೇಕು ಎಂದರು.

ಸ್ವಾಮಿ ವಿವೇಕಾನಂದರ ಬದುಕು-ಬರಹಗಳನ್ನು ಅಧ್ಯಯನ ಮಾಡಬೇಕು. ಇವರ ಬರಹಗಳನ್ನು ಓದುವದರಿಂದ ಆತ್ಮವಿಶ್ವಾಸ ಉಂಟಾಗಲಿದೆ ಎಂದರು.

ಕಾರ್ಯಕ್ರಮದಲ್ಲಿ ಸರ್ಕಾರಿ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಲ್ಯಾಪ್‍ಟಾಪ್ ವಿತರಿಸಲಾಯಿತು. ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಚಿತ್ರ, ಇತರರು ಇದ್ದರು.

ಮಡಿಕೇರಿ: ಜಿಲ್ಲಾ ಮಹಿಳಾ ಮೋರ್ಚಾದಿಂದ ನಗರದಲ್ಲಿ ಸ್ವಾಮಿ ವಿವೇಕಾನಂದ ಜಯಂತಿಯನ್ನು ಆಚರಿಸಲಾಯಿತು. ನಗರದ ಬಾಲಭವನದಲ್ಲಿ ಬಿಜೆಪಿ ಮಹಿಳಾ ಮೋರ್ಚಾದ ಅಧ್ಯಕ್ಷೆ ಯಮುನಾ ಚಂಗಪ್ಪ ಅಧ್ಯಕ್ಷತೆಯಲ್ಲಿ ಸಭಾ ಕಾರ್ಯಕ್ರಮ ನಡೆಯಿತು. ಈ ಸಂದರ್ಭ ಜಿಲ್ಲಾ ಬಿಜೆಪಿ ಅಧ್ಯಕ್ಷ ಬಿ.ಬಿ. ಭಾರತೀಶ್ ಭಾಗವಹಿಸಿ ಮಾತನಾಡಿ, ಸ್ವಾಮಿ ವಿವೇಕಾನಂದರು ಭಾರತೀಯ ಸಂಸ್ಕøತಿಯನ್ನು ವಿಶ್ವಕ್ಕೆ ಪರಿಚಯಿಸಿದ ಮಹಾನ್ ಸಂತ. ಅವರ ಜೀವನದ ಆದರ್ಶ ಗುಣಗಳನ್ನು ಎಲ್ಲರೂ ಮೈಗೂಡಿಸುವಂತೆ ಕರೆ ನೀಡಿದರು.

ಸಮಾರಂಭದ ಬಳಿಕ ಖಾಸಗಿ ಬಸ್ ನಿಲ್ದಾಣದ ಮೂಲಕ ಮೆರವಣಿಗೆ ನಡೆಯಿತು. ಈ ಸಂದರ್ಭ ಬಿಜೆಪಿ ಮಹಿಳಾ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಅನಿತಾ ಪೂವಯ್ಯ, ಕವಿತಾ ಬೆಳ್ಯಪ್ಪ, ನಳಿನಿ ಗಣೇಶ್ ಹಾಗೂ ಇನ್ನಿತರರು ಇದ್ದರು.

ಸೋಮವಾರಪೇಟೆ: ರಾಷ್ಟ್ರ ಕಂಡಂತಹ ಶ್ರೇಷ್ಠ ಸಂತರಾದ ಸ್ವಾಮಿ ವಿವೇಕಾನಂದ ಅವರ ತತ್ವಾದರ್ಶಗಳು ಯುವ ಜನಾಂಗಕ್ಕೆ ಪ್ರೇರಣೆಯಾಗಿದ್ದು, ವಿದ್ಯಾರ್ಥಿಗಳು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಸೋಮವಾರಪೇಟೆ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ವಿಜಯಲಕ್ಷ್ಮೀ ಸುರೇಶ್ ಅಭಿಪ್ರಾಯಿಸಿದರು.

ವಿವೇಕಾನಂದ ಅವರ 155ನೇ ಜನ್ಮ ದಿನಾಚರಣೆ ಅಂಗವಾಗಿ ಇಲ್ಲಿನ ವಿವೇಕಾನಂದ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಮಾತನಾಡಿದ ಅವರು, ವಿವೇಕಾನಂದ ಅವರ ಜೀವನವೇ ಸಮಾಜಕ್ಕೆ ಸ್ಪೂರ್ತಿ.

ಭಾರತದ ಶ್ರೀಮಂತ ಸಂಸ್ಕøತಿಯನ್ನು ವಿಶ್ವಮಟ್ಟದಲ್ಲಿ ಪ್ರಚಾರಪಡಿಸಿದ ವೀರ ಸನ್ಯಾಸಿ ವಿವೇಕಾನಂದರ ವಾಣಿಗಳು ಸಮಾಜದ ಎಲ್ಲರಿಗೂ ಮಾರ್ಗ ದರ್ಶನವಿದ್ದಂತೆ ಎಂದರು.

ತಾಲೂಕು ವಿವೇಕಾನಂದ ಜಯಂತ್ಯೋತ್ಸವ ಸಮಿತಿ ಆಶ್ರಯದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಸಮಿತಿಯ ಅಧ್ಯಕ್ಷ ಬಿ.ಎಸ್. ಸದಾನಂದ್, ರೋಟರಿ ಸಂಸ್ಥೆ ಮತ್ತು ವಿವೇಕಾನಂದ ಯೂತ್ ಮೂವ್‍ಮೆಂಟ್ ಆಶ್ರಯದಲ್ಲಿ ವಿಜ್ಞಾನ ವಾಹಿನಿ ಮೊಬೈಲ್ ವ್ಯಾನ್ ಸೋಮವಾರಪೇಟೆಗೆ ಆಗಮಿಸಿದ್ದು, ವಿಜ್ಞಾನಕ್ಕೆ ಸಂಬಂಧಿಸಿದಂತೆ ಎಲ್ಲಾ ಶಾಲೆಗಳಿಗೆ ತೆರಳಿ ಮಾಹಿತಿ ನೀಡಲಿದೆ ಎಂದರು.

ಇಲ್ಲಿನ ವಿವೇಕಾನಂದ ಜಯಂತ್ಯೋತ್ಸವ ಸಮಿತಿಯ ಆಶ್ರಯದಲ್ಲಿ ಕಳೆದ 5 ವರ್ಷಗಳಿಂದ ವಿವೇಕಾನಂದರ ಜನ್ಮ ದಿನಾಚರಣೆ ಆಚರಿಸಿಕೊಂಡು ಬರುತ್ತಿದ್ದು, ಈ ಬಾರಿ 155ನೇ ಜನ್ಮ ದಿನಾಚರಣೆ ಯೊಂದಿಗೆ ಸ್ವಾಮಿ ವಿವೇಕಾನಂದರು ಚಿಕಾಗೋದಲ್ಲಿ ಮಾಡಿದ ಭಾಷಣದ 125ನೇ ವರ್ಷಾಚರಣೆಯೂ ಆಗಿರುವದರಿಂದ ಈ ಕಾರ್ಯಕ್ರಮ ವನ್ನು ತಾ. 31 ರಂದು ಆಚರಿಸಲಾಗುವದು ಎಂದರು.

ಸಮಿತಿಯ ಕಾರ್ಯದರ್ಶಿ ಎಸ್. ಮಹೇಶ್ ಮಾತನಾಡಿ, ವಿವೇಕಾನಂದರ ಜಯಂತಿ ಪ್ರಯುಕ್ತ ತಾ. 25 ರಂದು ಮಾನಸ ಹಾಲ್‍ನಲ್ಲಿ ಪ್ರಾಥಮಿಕ ಶಾಲಾ ಮಕ್ಕಳಿಗೆ ಛದ್ಮವೇಶ, ಚಿತ್ರಕಲಾ ಸ್ಪರ್ಧೆ, ಪ್ರೌಢಶಾಲಾ ವಿಧ್ಯಾರ್ಥಿಗಳಿಗೆ ಭಾಷಣ ಸ್ಪರ್ಧೆ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಸ್ಪರ್ಧೆ ಆಯೋಜಿಸಲಾಗಿದೆ ಎಂದರು.

ವಿವೇಕಾನಂದ ಯುವ ಬಿಗ್ರೇಡ್‍ನ ಶ್ರೀನಿಧಿ ಮಾತನಾಡಿ, ವಿವೇಕಾನಂದರ ಸಂದೇಶಗಳನ್ನು ಅರ್ಥೈಸಿಕೊಂಡು ಜೀವನದಲ್ಲಿ ಅಳವಡಿಸಿಕೊಂಡರೆ ಯಶಸ್ಸು ಖಚಿತ ಎಂದರು. ಕಾರ್ಯಕ್ರಮದಲ್ಲಿ ಸಮಿತಿಯ ಖಜಾಂಜಿ ಮೃತ್ಯುಂಜಯ, ಯುವ ಬ್ರಿಗೇಡ್‍ನ ಅಭಿಷೇಕ್, ವಿವೇಕಾನಂದ ಯುವಕ ಸಂಘದ ಅರುಣ್, ಮನು ಚೌಡ್ಲು, ಜ್ಞಾನವಿಕಾಸ ಶಾಲೆಯ ಮುಖ್ಯೋಪಾಧ್ಯಾಯಿನಿ ಅನಿತಾ ಉಪಸ್ಥಿತರಿದ್ದರು.ರೋಟರಿ ಸೇರಿದಂತೆ ವಿವಿಧ ಸಂಘಸಂಸ್ಥೆಗಳ ಪ್ರಮುಖರು, ಜ್ಞಾನ ವಿಕಾಸ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಕುಶಾಲನಗರ: ಕುಶಾಲನಗರದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಯುವ ರೆಡ್‍ಕ್ರಾಸ್, ಎನ್.ಎಸ್.ಎಸ್. ಘಟಕ, ಹಳೆಯ ವಿದ್ಯಾರ್ಥಿ ಸಂಘ ಹಾಗೂ ರಾಷ್ಟ್ರೋತ್ಹಾನ ರಕ್ತನಿಧಿ ಜಂಟಿ ಆಶ್ರಯದಲ್ಲಿ ಸ್ವಾಮಿ ವಿವೇಕಾನಂದ ಜಯಂತಿ ಪ್ರಯುಕ್ತ ಕಾಲೇಜಿನ ಸಭಾಂಗಣದಲ್ಲಿ ಸ್ವಯಂಪ್ರೇರಿತ ರಕ್ತದಾನ ಶಿಬಿರ ನಡೆಯಿತು. ಕಾಲೇಜು ಪ್ರಾಂಶುಪಾಲ ಪ್ರೊ. ಪಿ.ಎಂ. ಸುಬ್ರಮಣ್ಯ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ವಕೀಲರು ಹಾಗೂ ಹಳೆಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಎಸ್.ಕೆ. ಮಂಜುನಾಥ್ ಉದ್ಘಾಟಿಸಿದರು. ಕಾಲೇಜು ವಿದ್ಯಾರ್ಥಿಗಳು, ಹಳೆಯ ವಿದ್ಯಾರ್ಥಿಗಳು ಹಾಗೂ ಪ್ರಾಧ್ಯಾಪಕ ವೃಂದದವರು ರಕ್ತದಾನ ಮಾಡಿದರು. ಈ ಸಂದರ್ಭ ರಾಷ್ಟ್ರೋತ್ಥಾನ ರಕ್ತನಿಧಿ ಘಟಕದ ಶಿಬಿರ ಸಂಯೋಜಕ ನರಸಿಂಹಶಾಸ್ತ್ರಿ, ಹಳೆಯ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ನವನೀತ್ ಪೊನ್ನೇಟಿ, ಸದಸ್ಯ ಕೆ.ವಿ. ಅನುದೀಪ್, ಕಾಲೇಜು ವಿದ್ಯಾರ್ಥಿ ಸಮಿತಿ ಉಪಾಧ್ಯಕ್ಷ ಲೋಹಿತ್, ಪ್ರೊ. ಹೆಚ್.ಬಿ. ಲಿಂಗಮೂರ್ತಿ, ಪಿ.ಟಿ. ಕಾಶಿ ಕುಮಾರ್, ಉದ್ಯಮಿ ಬಿ.ಆರ್. ಜನಾರ್ಧನ್, ವೈದ್ಯರಾದ ಡಾ. ಸುಮಿತ್ರಾ ಹಾಗೂ ಸಿಬ್ಬಂದಿಗಳು ಇದ್ದರು.ಸೋಮವಾರಪೇಟೆ: ರಾಷ್ಟ್ರ ಕಂಡಂತಹ ಶ್ರೇಷ್ಠ ಸಂತರಾದ ಸ್ವಾಮಿ ವಿವೇಕಾನಂದ ಅವರ ತತ್ವಾದರ್ಶಗಳು ಯುವ ಜನಾಂಗಕ್ಕೆ ಪ್ರೇರಣೆಯಾಗಿದ್ದು, ವಿದ್ಯಾರ್ಥಿಗಳು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಸೋಮವಾರಪೇಟೆ ಪಟ್ಟಣ ಪಂಚಾಯಿತಿ ಅಧ್ಯಕ್ಷೆ ವಿಜಯಲಕ್ಷ್ಮೀ ಸುರೇಶ್ ಅಭಿಪ್ರಾಯಿಸಿದರು.

ವಿವೇಕಾನಂದ ಅವರ 155ನೇ ಜನ್ಮ ದಿನಾಚರಣೆ ಅಂಗವಾಗಿ ಇಲ್ಲಿನ ವಿವೇಕಾನಂದ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಮಾತನಾಡಿದ ಅವರು, ವಿವೇಕಾನಂದ ಅವರ ಜೀವನವೇ ಸಮಾಜಕ್ಕೆ ಸ್ಪೂರ್ತಿ.

ಭಾರತದ ಶ್ರೀಮಂತ ಸಂಸ್ಕøತಿಯನ್ನು ವಿಶ್ವಮಟ್ಟದಲ್ಲಿ ಪ್ರಚಾರಪಡಿಸಿದ ವೀರ ಸನ್ಯಾಸಿ ವಿವೇಕಾನಂದರ ವಾಣಿಗಳು ಸಮಾಜದ ಎಲ್ಲರಿಗೂ ಮಾರ್ಗ ದರ್ಶನವಿದ್ದಂತೆ ಎಂದರು.

ತಾಲೂಕು ವಿವೇಕಾನಂದ ಜಯಂತ್ಯೋತ್ಸವ ಸಮಿತಿ ಆಶ್ರಯದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಸಮಿತಿಯ ಅಧ್ಯಕ್ಷ ಬಿ.ಎಸ್. ಸದಾನಂದ್, ರೋಟರಿ ಸಂಸ್ಥೆ ಮತ್ತು ವಿವೇಕಾನಂದ ಯೂತ್ ಮೂವ್‍ಮೆಂಟ್ ಆಶ್ರಯದಲ್ಲಿ ವಿಜ್ಞಾನ ವಾಹಿನಿ ಮೊಬೈಲ್ ವ್ಯಾನ್ ಸೋಮವಾರಪೇಟೆಗೆ ಆಗಮಿಸಿದ್ದು, ವಿಜ್ಞಾನಕ್ಕೆ ಸಂಬಂಧಿಸಿದಂತೆ ಎಲ್ಲಾ ಶಾಲೆಗಳಿಗೆ ತೆರಳಿ ಮಾಹಿತಿ ನೀಡಲಿದೆ ಎಂದರು.

ಇಲ್ಲಿನ ವಿವೇಕಾನಂದ ಜಯಂತ್ಯೋತ್ಸವ ಸಮಿತಿಯ ಆಶ್ರಯದಲ್ಲಿ ಕಳೆದ 5 ವರ್ಷಗಳಿಂದ ವಿವೇಕಾನಂದರ ಜನ್ಮ ದಿನಾಚರಣೆ ಆಚರಿಸಿಕೊಂಡು ಬರುತ್ತಿದ್ದು, ಈ ಬಾರಿ 155ನೇ ಜನ್ಮ ದಿನಾಚರಣೆ ಯೊಂದಿಗೆ ಸ್ವಾಮಿ ವಿವೇಕಾನಂದರು ಚಿಕಾಗೋದಲ್ಲಿ ಮಾಡಿದ ಭಾಷಣದ 125ನೇ ವರ್ಷಾಚರಣೆಯೂ ಆಗಿರುವದರಿಂದ ಈ ಕಾರ್ಯಕ್ರಮ ವನ್ನು ತಾ. 31 ರಂದು ಆಚರಿಸಲಾಗುವದು ಎಂದರು.

ಸಮಿತಿಯ ಕಾರ್ಯದರ್ಶಿ ಎಸ್. ಮಹೇಶ್ ಮಾತನಾಡಿ, ವಿವೇಕಾನಂದರ ಜಯಂತಿ ಪ್ರಯುಕ್ತ ತಾ. 25 ರಂದು ಮಾನಸ ಹಾಲ್‍ನಲ್ಲಿ ಪ್ರಾಥಮಿಕ ಶಾಲಾ ಮಕ್ಕಳಿಗೆ ಛದ್ಮವೇಶ, ಚಿತ್ರಕಲಾ ಸ್ಪರ್ಧೆ, ಪ್ರೌಢಶಾಲಾ ವಿಧ್ಯಾರ್ಥಿಗಳಿಗೆ ಭಾಷಣ ಸ್ಪರ್ಧೆ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಸ್ಪರ್ಧೆ ಆಯೋಜಿಸಲಾಗಿದೆ ಎಂದರು.

ವಿವೇಕಾನಂದ ಯುವ ಬಿಗ್ರೇಡ್‍ನ ಶ್ರೀನಿಧಿ ಮಾತನಾಡಿ, ವಿವೇಕಾನಂದರ ಸಂದೇಶಗಳನ್ನು ಅರ್ಥೈಸಿಕೊಂಡು ಜೀವನದಲ್ಲಿ ಅಳವಡಿಸಿಕೊಂಡರೆ ಯಶಸ್ಸು ಖಚಿತ ಎಂದರು. ಕಾರ್ಯಕ್ರಮದಲ್ಲಿ ಸಮಿತಿಯ ಖಜಾಂಜಿ ಮೃತ್ಯುಂಜಯ, ಯುವ ಬ್ರಿಗೇಡ್‍ನ ಅಭಿಷೇಕ್, ವಿವೇಕಾನಂದ ಯುವಕ ಸಂಘದ ಅರುಣ್, ಮನು ಚೌಡ್ಲು, ಜ್ಞಾನವಿಕಾಸ ಶಾಲೆಯ ಮುಖ್ಯೋಪಾಧ್ಯಾಯಿನಿ ಅನಿತಾ ಉಪಸ್ಥಿತರಿದ್ದರು.ರೋಟರಿ ಸೇರಿದಂತೆ ವಿವಿಧ ಸಂಘಸಂಸ್ಥೆಗಳ ಪ್ರಮುಖರು, ಜ್ಞಾನ ವಿಕಾಸ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಕುಶಾಲನಗರ: ಕುಶಾಲನಗರದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಯುವ ರೆಡ್‍ಕ್ರಾಸ್, ಎನ್.ಎಸ್.ಎಸ್. ಘಟಕ, ಹಳೆಯ ವಿದ್ಯಾರ್ಥಿ ಸಂಘ ಹಾಗೂ ರಾಷ್ಟ್ರೋತ್ಹಾನ ರಕ್ತನಿಧಿ ಜಂಟಿ ಆಶ್ರಯದಲ್ಲಿ ಸ್ವಾಮಿ ವಿವೇಕಾನಂದ ಜಯಂತಿ ಪ್ರಯುಕ್ತ ಕಾಲೇಜಿನ ಸಭಾಂಗಣದಲ್ಲಿ ಸ್ವಯಂಪ್ರೇರಿತ ರಕ್ತದಾನ ಶಿಬಿರ ನಡೆಯಿತು. ಕಾಲೇಜು ಪ್ರಾಂಶುಪಾಲ ಪ್ರೊ. ಪಿ.ಎಂ. ಸುಬ್ರಮಣ್ಯ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ವಕೀಲರು ಹಾಗೂ ಹಳೆಯ ವಿದ್ಯಾರ್ಥಿ ಸಂಘದ ಅಧ್ಯಕ್ಷರಾದ ಎಸ್.ಕೆ. ಮಂಜುನಾಥ್ ಉದ್ಘಾಟಿಸಿದರು. ಕಾಲೇಜು ವಿದ್ಯಾರ್ಥಿಗಳು, ಹಳೆಯ ವಿದ್ಯಾರ್ಥಿಗಳು ಹಾಗೂ ಪ್ರಾಧ್ಯಾಪಕ ವೃಂದದವರು ರಕ್ತದಾನ ಮಾಡಿದರು. ಈ ಸಂದರ್ಭ ರಾಷ್ಟ್ರೋತ್ಥಾನ ರಕ್ತನಿಧಿ ಘಟಕದ ಶಿಬಿರ ಸಂಯೋಜಕ ನರಸಿಂಹಶಾಸ್ತ್ರಿ, ಹಳೆಯ ವಿದ್ಯಾರ್ಥಿ ಸಂಘದ ಉಪಾಧ್ಯಕ್ಷ ನವನೀತ್ ಪೊನ್ನೇಟಿ, ಸದಸ್ಯ ಕೆ.ವಿ. ಅನುದೀಪ್, ಕಾಲೇಜು ವಿದ್ಯಾರ್ಥಿ ಸಮಿತಿ ಉಪಾಧ್ಯಕ್ಷ ಲೋಹಿತ್, ಪ್ರೊ. ಹೆಚ್.ಬಿ. ಲಿಂಗಮೂರ್ತಿ, ಪಿ.ಟಿ. ಕಾಶಿ ಕುಮಾರ್, ಉದ್ಯಮಿ ಬಿ.ಆರ್. ಜನಾರ್ಧನ್, ವೈದ್ಯರಾದ ಡಾ. ಸುಮಿತ್ರಾ ಹಾಗೂ ಸಿಬ್ಬಂದಿಗಳು ಇದ್ದರು.

ಪಾಲಿಬೆಟ್ಟ: ರಾಷ್ಟ್ರ ನಿರ್ಮಾಣದಲ್ಲಿ ಪ್ರಮುಖ ಪಾತ್ರ ವಹಿಸುವ ಯುವ ಜನತೆ ವಿವೇಕಾನಂದರ ಆದರ್ಶ ಗಳನ್ನು ಪಾಲಿಸಬೇಕೆಂದು ಸೋಮವಾರಪೇಟೆ ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷ ವಿ.ಕೆ. ಲೋಕೇಶ್ ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಸಮೀಪದ ಪಾಲಿಬೆಟ್ಟ ಸರಕಾರಿ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕವು ಸ್ವಾಮಿ ವಿವೇಕಾನಂದರ ಜನ್ಮದಿನದ ಅಂಗವಾಗಿ ಹಮ್ಮಿಕೊಂಡಿದ್ದ ರಾಷ್ಟ್ರೀಯ ಯುವ ದಿನಾಚರಣೆಯ ಕಾರ್ಯಕ್ರಮದಲ್ಲಿ ಮುಖ್ಯ ಭಾಷಣಕಾರರಾಗಿ ಮಾತನಾಡಿ, ಸ್ವಾಮಿ ವಿವೇಕಾನಂದರು ಸಣ್ಣ ವಯಸ್ಸಿನಲ್ಲಿಯೇ ವೈಚಾರಿಕ ಮನೋಭಾವನೆಯನ್ನು ಬೆಳೆಸಿಕೊಂಡು ಎಲ್ಲವನ್ನೂ ಕೂಡ ಪ್ರಶ್ನಿಸುತ್ತಿದ್ದರು. ಸಮಾಜಕ್ಕೆ ಶಾಪವಾಗಿದ್ದ ಬಡತನ, ಜಾತಿ ಪದ್ಧತಿ ಹಾಗೂ ಮೂಡ ನಂಬಿಕೆಗಳನ್ನು ವಿರೋಧಿಸಿದ ಸ್ವಾಮಿ ವಿವೇಕಾನಂದರು ದೇಶಭಕ್ತ ಹಾಗೂ ಸೇವಾ ಮನೋಭಾವನೆಯನ್ನು ಮೈಗೂಡಿಸಿಕೊಂಡಿದ್ದರು. ಯುವಜನತೆ ಸ್ವಾಮಿ ವಿವೇಕಾನಂದರ ಆದರ್ಶಗಳನ್ನು ಮೈಗೂಡಿಸಿಕೊಂಡು ದೇಶವನ್ನು ಬಲಿಷ್ಠಗೊಳಿಸಬೇಕೆಂದು ಮನವಿ ಮಾಡಿದರು. ಉದ್ಘಾಟಿಸಿದ ಕೊಡಗು ಶಿಕ್ಷಣ ನಿಧಿಯ ಮುಖ್ಯಸ್ಥ ಕೆ.ಪಿ. ಉತ್ತಪ್ಪ ಮಾತನಾಡುತ್ತಾ ಸ್ವಾಮಿ ವಿವೇಕಾನಂದರಲ್ಲಿದ್ದ ಶ್ರದ್ಧೆಯನ್ನು ಯುವಕರು ಅಳವಡಿಸಿಕೊಳ್ಳಬೇಕು. ವಿವೇಕಾನಂದರು ಚಿಕಾಗೋ ಭಾಷಣದ ಮುಖಾಂತರ ದೇಶಕ್ಕೆ ಕೀರ್ತಿಯನ್ನು ತಂದು ಕೊಟ್ಟರು. ಅದೇ ರೀತಿಯಲ್ಲಿ ಆಧುನಿಕ ಯುವಕರು ಕೂಡಾ ಸ್ವಾಮಿ ವಿವೇಕಾನಂದರ ಆದರ್ಶಗಳನ್ನು ಮೈಗೂಡಿಸಿಕೊಂಡು ದೇಶವನ್ನು ವಿಶ್ವಗುರುವನ್ನಾಗಿ ಮಾಡಬೇಕೆಂದು ಕರೆ ನೀಡಿದರು. ಕಾಲೇಜಿನ ಉಪನ್ಯಾಸಕಿ ಇಂದು ವಿದ್ಯಾರ್ಥಿಗಳಿಗೆ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು. ಇದೇ ಸಂದರ್ಭ ಸಮಾಜ ಸೇವಕ ಕೆ.ಎನ್. ವಸಂತ್ ಹಾಗೂ ಕೂತಂಡ ಬೋಜಮ್ಮ ಮಂದಣ್ಣ ಅವರನ್ನು ಸನ್ಮಾನಿಸಲಾಯಿತು. ರಾಷ್ಟ್ರೀಯ ಯುವ ದಿನಾಚರಣೆಯ ಅಂಗವಾಗಿ ವಿದ್ಯಾರ್ಥಿಗಳಿಗೆ ಚಿತ್ರಕಲೆ, ರಸಪ್ರಶ್ನೆ, ಪ್ರಬಂಧ ಹಾಗೂ ವಿವೇಕವಾಣಿ ಪಠಣ ಸ್ಪರ್ಧೆ ಏರ್ಪಡಿಸಿ, ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಪಾಲಿಬೆಟ್ಟ ವಿಜಯ ಬ್ಯಾಂಕಿನ ವ್ಯವಸ್ಥಾಪಕ ಸದಾಶಿವ ಆಚಾರ್ಯ, ಕಾಲೇಜಿನ ಪ್ರಾಚಾರ್ಯೆ ಡಾ. ಕೆ.ಎಂ. ಭವಾನಿ ಇದ್ದರು. ಅರ್ಥಶಾಸ್ತ್ರ ಉಪನ್ಯಾಸಕಿ ಸುನಿತಾ ಕೆ.ಕೆ. ಕಾರ್ಯಕ್ರಮ ನಿರೂಪಿಸಿದರು, ಉಪನ್ಯಾಸಕ ಪಿ.ಆರ್. ಶಿವದಾಸ್ ಸ್ವಾಗತಿಸಿ, ಉಪನ್ಯಾಸಕಿ ಎಂ.ಬಿ. ಪಾರ್ವತಿ ವಂದಿಸಿದರು. ವಿದ್ಯಾರ್ಥಿನಿಗಳಾದ ಸುರಯ್ಯ, ನೌಫೀನಾ ಹಾಗೂ ತಾಹೀರ ಪ್ರಾರ್ಥಿಸಿದರು.

ಸೋಮವಾರಪೇಟೆ : ಸಮೀಪದ ಹಾನಗಲ್ಲು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಾಗಿದ್ದ ಸುಮಾರು 15 ಮಂದಿ ಮಾಜೀ ಸಚಿವ ಬಿ.ಎ. ಜೀವಿಜಯ ಸಮ್ಮುಖದಲ್ಲಿ ಜೆಡಿಎಸ್ ಸೇರ್ಪಡೆಗೊಂಡರು. ಮಧು, ಚೋಮಣಿ, ಗಾಂಧಿ. ಡೀಲಾಕ್ಷ ಸೇರಿದಂತೆ ಇತರರು, ಪಕ್ಷದ ಕ್ಷೇತ್ರ ಸಮಿತಿ ಅಧ್ಯಕ್ಷ ಸುರೇಶ್, ಯುವ ಜೆಡಿಎಸ್ ಅಧ್ಯಕ್ಷ ಪ್ರವೀಣ್, ಜಿಲ್ಲಾ ವಕ್ತಾರ ಕಾಟ್ನಮನೆ ವಿಠಲ್‍ಗೌಡ ಸಮ್ಮುಖದಲ್ಲಿ ಜೆಡಿಎಸ್ ಸೇರಿದರು. ಕಾಂಗ್ರೆಸ್ ಸೇರ್ಪಡೆ: ಮೂಲತಃ ಕಾಂಗ್ರೆಸ್ ಮುಖಂಡ, ತಾಲೂಕು ಪಂಚಾಯಿತಿ ಮಾಜೀ ಸದಸ್ಯ, ಸದ್ಯ ಬಿಜೆಪಿಯಲ್ಲಿದ್ದ ಪಾಲಾಕ್ಷ ಅವರು ಮಡಿಕೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ರಾಜ್ಯಾಧ್ಯಕ್ಷ ಪರಮೇಶ್ವರ ಅವರ ಸಮ್ಮುಖದಲ್ಲಿ ಕಾಂಗ್ರೆಸ್ ಸೇರ್ಪಡೆಗೊಂಡರು. ಕೊಡ್ಲಿಪೇಟೆ ಭಾಗದ ಕಾಂಗ್ರೆಸ್ ಪ್ರಮುಖರಾದ ಔರಂಗಜೇಬ್, ಅಬ್ಬಾಸ್, ಹನೀಫ್ ಸೇರಿದಂತೆ ಇತರರ ಸಮ್ಮುಖದಲ್ಲಿ ಪಕ್ಷ ಸೇರ್ಪಡೆಗೊಂಡರು.ಮೂರ್ನಾಡು : ಇಲ್ಲಿನ ಪ. ಪೂ. ಕಾಲೇಜಿನ ರಾಷ್ಟ್ರೀಯ ಸೇವಾಯೋಜನಾ

ಘಟಕದ ವತಿಯಿಂದ ವಿವೇಕಾನಂದ ಜನ್ಮ ದಿನದ ಅಂಗವಾಗಿ ರಾಷ್ಟ್ರೀಯ ಯುವ ದಿನಾಚರಣೆಯನ್ನು ಆಚರಿಸಲಾಯಿತು.ಮೂರ್ನಾಡು ವಿದ್ಯಾಸಂಸ್ಥೆಯ ಕಾವೇರಿ ಸಭಾಂಗಣದಲ್ಲಿ ಆಯೋಜಿಸಲಾದ ಕಾರ್ಯಕ್ರಮವನ್ನು ಮೂರ್ನಾಡು ವಿವೇಕ ಜಾಗೃತ ಬಳಗದ ಅಧ್ಯಕ್ಷೆ ದಿವ್ಯ ತೇಜ ಕುಮಾರ್ ಉದ್ಘಾಟಿಸಿದರು. ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲೆ ಪಿ.ಎಂ. ದೇವಕಿ ಅಧ್ಯಕ್ಷತೆ ವಹಿಸಿದರು. ವೇದಿಕೆಯಲ್ಲಿ ಎನ್‍ಎಸ್‍ಎಸ್ ಯೋಜನಾಧಿಕಾರಿ ಯು.ಸಿ. ಮಾಲತಿ, ಉಪನ್ಯಾಸಕಿ ಮಮತ, ವಿವೇಕ ಜಾಗೃತ ಬಳಗದ ಅನುರಾಧ ನಾಗರಾಜ್, ಸುಮ ಸುಬ್ಬಯ್ಯ ಹಾಗೂ ಉಪನ್ಯಾಸಕ ವೃಂದದವರು ಹಾಜರಿದ್ದರು.