ಸಿದ್ದಾಪುರ, ಜ. 16: ಕ್ಷುಲ್ಲಕ ಕಾರಣಕ್ಕೆ ಹೊಡೆದಾಟ ನಡೆದು, ಜಾತಿ ನಿಂದನೆ ಪ್ರಕರಣ ದಾಖಲಾಗಿರುವ ಘಟನೆ ಸಿದ್ದಾಪುರದಲ್ಲಿ ನಡೆದಿದೆ.
ಅಭ್ಯತ್‍ಮಂಗಲ ಜ್ಯೋತಿನಗರದ ನಿವಾಸಿ ಆಟೋ ಚಾಲಕ ಬಿ.ಸಿ. ಸುರೇಶ ಎಂಬಾತನಿಗೂ ಸಿದ್ದಾಪುರದ ಸಿರಾಜ್ ಹಾಗೂ ಮತ್ತಿತ್ತರ ನಡುವೆ ಮಡಿಕೇರಿ ರಸ್ತೆಯಲ್ಲಿ ಕ್ಷುಲ್ಲಕ ಕಾರಣಕ್ಕೆ ಕಲಹ ನಡೆದಿದೆ ಎನ್ನಲಾಗಿದೆ. ಈ ಸಂದರ್ಭ ಸಿರಾಜ್ ಹಾಗೂ ಇತರರು ಸುರೇಶ್ ಮೇಲೆ ಹಲ್ಲೆ ನಡೆಸಿ ಜಾತಿ ನಿಂದನೆ ಮಾಡಿದ್ದಾರೆ ಎಂದು ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಮಡಿಕೇರಿ ವಿಭಾಗದ ಡಿ.ವೈ.ಎಸ್.ಪಿ. ಸುಂದರ್‍ರಾಜ್ ಭೇಟಿ ನೀಡಿ ಪರಿಶೀಲಿಸಿ, ಮುಂದಿನ ಕ್ರಮ ಕೈಗೊಂಡಿದ್ದಾರೆ.