ನಾಪೆÇೀಕ್ಲು, ಜ. 16: ಸರಕಾರ ಗ್ರಾಮೀಣ ಪ್ರದೇಶದ ಕ್ರೀಡೆ ಮತ್ತು ಕ್ರೀಡಾಪಟುಗಳಿಗೆ ಹೆಚ್ಚಿನ ಸೌಲಭ್ಯ ನೀಡಬೇಕು ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಮೇರಿಯಂಡ ಸಂಕೇತ್ ಪೂವಯ್ಯ ಹೇಳಿದರು. ನಾಪೆÇೀಕ್ಲು ಸರಕಾರಿ ಮಾದರಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ಡೆಕ್ಕನ್ ಯೂತ್ ಕ್ಲಬ್ ವತಿಯಿಂದ ಎರಡು ದಿನಗಳ ಕಾಲ ನಡೆದ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯದ ಸಮಾರೋಪ ಸಮಾರಂಭದಲ್ಲಿ ಅವರು ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಮಾತನಾಡಿದರು. ಸ್ಥಳೀಯ ಸಂಘ ಸಂಸ್ಥೆಗಳು ಗ್ರಾಮೀಣ ಪ್ರದೇಶದ ಕ್ರೀಡಾಪಟುಗಳನ್ನು ಪೆÇ್ರೀತ್ಸಾಹಿಸುವ ನಿಟ್ಟಿನಲ್ಲಿ ಹಲವಾರು ಕ್ರೀಡಾಕೂಟವನ್ನು ಆಯೋಜಿಸುತ್ತಿದ್ದಾರೆ. ಸರಕಾರ ಮಾಡಬೇಕಾದ ಕಾರ್ಯ ಇವರಿಂದ ನಡೆಯುತ್ತಿದೆ. ಇದು ಶ್ಲಾಘನೀಯ ಎಂದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಡೆಕ್ಕನ್ ಯೂತ್ ಕ್ಲಬ್ ಅಧ್ಯಕ್ಷ ಎಂ.ಎ.ಮನ್ಸೂರ್ ಅಲಿ ವಹಿಸಿದ್ದರು.
ವೇದಿಕೆಯಲ್ಲಿ ಜಿಲ್ಲಾ ವಕ್ಫ್ ಬೋರ್ಡ್ ಅಧ್ಯಕ್ಷ ಎಂ.ಹೆಚ್.ಅಬ್ದುಲ್ ರೆಹಮಾನ್, ಹೊದವಾಡ ಗ್ರಾ.ಪಂ. ಮಾಜಿ ಅಧ್ಯಕ್ಷ ಹೆಚ್.ಎ.ಹಂಸ, ಜೆಡಿಎಸ್ ವೀರಾಜಪೇಟೆ ಕ್ಷೇತ್ರದ ವಿಧಾನಸಭಾ ಅಧ್ಯಕ್ಷ ಮತೀನ್, ಮತ್ತಿತರರು ಇದ್ದರು.