ಕುಶಾಲನಗರ, ಜ. 18: ಕುಶಾಲನಗರ ಪಟ್ಟಣದ ಹೃದಯ ಭಾಗದಲ್ಲಿ ತಳ್ಳುವ ಗಾಡಿಗಳು ಎಲ್ಲೆಂದರಲ್ಲಿ ಅನಧಿಕೃತವಾಗಿ ವ್ಯಾಪಾರ ವಹಿವಾಟು ಮಾಡುತ್ತಿರುವ ಹಿನ್ನೆಲೆಯಲ್ಲಿ ಪಾದಚಾರಿಗಳಿಗೆ ಮತ್ತು ವಾಹನ ಸವಾರರಿಗೆ ಭಾರೀ ಅನಾನುಕೂಲವಾಗುತ್ತಿದ್ದ ಕಾರಣ ಸಂಚಾರಿ ಪೊಲೀಸರು ತೆರವು ಕಾರ್ಯಾಚರಣೆ ನಡೆಸಿದರು.
ಕುಶಾಲನಗರ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣ ಮುಂಭಾಗ ತಳ್ಳುವ ಗಾಡಿಗಳು ಹೆಚ್ಚಿನ ಸಂಖ್ಯೆಯಲ್ಲಿ ಹೆದ್ದಾರಿ ಬದಿಯಲ್ಲಿ ನಿಲ್ಲಿಸಿ ವ್ಯಾಪಾರ ಮಾಡುತ್ತಿದ್ದು, ಈ ಬಗ್ಗೆ ನಾಗರೀಕರು ಪಂಚಾಯ್ತಿ ಮತ್ತು ಪೊಲೀಸರಿಗೆ ದೂರು ನೀಡಿದ್ದು ಈ ಸಂಬಂಧ ಸಂಚಾರಿ ಪೊಲೀಸ್ ಠಾಣಾಧಿಕಾರಿ ಅಪ್ಪಾಜಿ ನೇತೃತ್ವದಲ್ಲಿ ತೆರವುಗೊಳಿಸುವ ಕಾರ್ಯ ನಡೆಯಿತು.