ಕುಶಾಲನಗರ, ಜ. 18: ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಆಶ್ರಯದಲ್ಲಿ ದಿ. ವಿ.ಎಸ್. ರಾಮಕೃಷ್ಣ ದತ್ತಿ ಹಾಗೂ ಅಗಲಿದ ಕಸಾಪ ಸದಸ್ಯರ ಸ್ಮರಣಾರ್ಥ ಪುಸ್ತಕ ಕೊಡುಗೆ ಕಾರ್ಯಕ್ರಮ ಸ್ಥಳೀಯ ಬಾಲಕಿಯರ ಸರಕಾರಿ ಪ್ರೌಢಶಾಲೆಯಲ್ಲಿ ನಡೆಯಿತು.
ಶಾಲಾಭಿವೃದ್ಧಿ ಸಮಿತಿ ಗೌರವಾಧ್ಯಕ್ಷ ವಿ.ಪಿ. ನಾಗೇಶ್ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮವನ್ನು ಶಾಲಾ ಸ್ಥಾಪಕ ಅಧ್ಯಕ್ಷ ವಿ.ಪಿ. ಶಶಿಧರ್ ಉದ್ಘಾಟಿಸಿದರು. ಕಸಾಪ ಕೊಡಗು ಜಿಲ್ಲಾ ಘಟಕ ಅಧ್ಯಕ್ಷ ಬಿ.ಎಸ್. ಲೋಕೇಶ್ ಸಾಗರ್ ಪ್ರಾಸ್ತಾವಿಕ ನುಡಿಗಳಾಡಿದರು.
ಮುಖ್ಯ ಅತಿಥಿಗಳಾಗಿ ಕಸಾಪ ಪದಾಧಿಕಾರಿಗಳಾದ ಫಿಲಿಪ್‍ವಾಸ್, ಈಶ, ಕೆ.ಕೆ. ನಾಗರಾಜ ಶೆಟ್ಟಿ, ವಕೀಲರ ಸಂಘದ ಅಧ್ಯಕ್ಷ ಆರ್.ಕೆ. ನಾಗೇಂದ್ರ ಇದ್ದರು. ವಿದ್ಯಾರ್ಥಿನಿ ಸ್ಫ್ಪೂರ್ತಿ ಪ್ರಾರ್ಥಿಸಿ, ಶಾಲಾ ಮುಖ್ಯ ಶಿಕ್ಷಕಿ ಬಿ.ಎನ್. ಪುಷ್ಪಾ ಸ್ವಾಗತಿಸಿದರೆ, ಶಿಕ್ಷಕಿ ಮಾರ್ಗರೇಟ್ ಕಾರ್ಯಕ್ರಮ ನಿರೂಪಿಸಿದರು.