ಮೂರ್ನಾಡು, ಜ. 18: ವಿದ್ಯಾರ್ಥಿಗಳಲ್ಲಿ ಅಡಗಿರುವ ಪ್ರತಿಭೆಯನ್ನು ಗುರುತಿಸಿ, ಪ್ರತಿಭೆಗಳನ್ನು ಹೊರಹೊಮ್ಮಿಸಲು ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡಬೇಕು ಎಂದು ಗೋಣಿಕೊಪ್ಪಲು ಕಾವೇರಿ ಕಾಲೇಜಿನ ಪ್ರಾಂಶುಪಾಲ ಪ್ರೊ. ಪಟ್ಟಡ ಪೂವಣ್ಣ ಹೇಳಿದರು.

ಮೂರ್ನಾಡು ವಿದ್ಯಾಸಂಸ್ಥೆಯ ಬಾಚೆಟ್ಟಿರ ಕಮಲು ಮುದ್ದಯ್ಯ ಬಯಲು ರಂಗಮಂದಿರದಲ್ಲಿ ಆಯೋಜಿಸಲಾದ ವಿದ್ಯಾಸಂಸ್ಥೆ ವಾರ್ಷಿಕೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿ ಮಾತನಾಡಿದರು.

ವಿದ್ಯಾಸಂಸ್ಥೆ ಅಧ್ಯಕ್ಷ ಬಾಚೆಟ್ಟಿರ ಜಿ. ಮಾದಪ್ಪ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ವಿದ್ಯಾಸಂಸ್ಥೆ ಉಪಾಧ್ಯಕ್ಷ ಪಳಂಗಂಡ ಮುದ್ದಪ್ಪ, ಕಾರ್ಯದರ್ಶಿ ಚೌರೀರ ಎಂ. ಪೆಮ್ಮಯ್ಯ, ಖಜಾಂಚಿ ಪುದಿಯೊಕ್ಕಡ ಸುಬ್ರಮಣಿ, ನಿರ್ದೇಶಕರಾದ ಪೆಮ್ಮುಡಿಯಂಡ ವೇಣು ಅಪ್ಪಣ್ಣ, ಬಡುವಂಡ ಸುಬ್ರಮಣಿ, ಎ.ಎಂ. ಶೈಲಾ, ನಂದೇಟಿರ ರಾಜ ಮಾದಪ್ಪ, ಈರಮಂಡ ಸೋಮಣ್ಣ, ದಾನಿ ಬಾಚೆಟ್ಟಿರ ಲಾಲು ಮುದ್ದಯ್ಯ, ಕಮಲು ಮುದ್ದಯ್ಯ, ಪೆಮ್ಮುಡಿಯಂಡ ಮಂದಣ್ಣ, ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲೆ ಪ್ರೊ. ಭಾಗೀರಥಿ, ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲೆ ಪಿ.ಎಂ. ದೇವಕಿ, ಪ್ರೌಢಶಾಲೆ ಮುಖ್ಯ ಶಿಕ್ಷಕಿ ಎ.ಎಸ್. ರಶ್ಮಿ, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ಎಸ್.ಡಿ. ಪ್ರಶಾಂತ್ ಇತರರು ಉಪಸ್ಥಿತರಿದ್ದರು.

ಕಳೆದ ಸಾಲಿನಲ್ಲಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ದತ್ತಿನಿಧಿ ಬಹುಮಾನ ವಿತರಿಸಲಾಯಿತು. ಈ ಸಂದರ್ಭ ನಿವೃತ್ತ ವಲಯ ಅರಣ್ಯಾಧಿಕಾರಿ ಪಾಡಿಯಂಡ ಜಿ. ಮುತ್ತಪ್ಪ ತಂಡದಿಂದ ಬಾಳೊಪಾಟ್, ಶಾಲಾ-ಕಾಲೇಜು ವಿದ್ಯಾರ್ಥಿಗಳಿಂದ ಸಾಂಸ್ಕøತಿಕ ಕಾರ್ಯಕ್ರಮ ಜರುಗಿತು.

ವಿದ್ಯಾಸಂಸ್ಥೆ ಕಾರ್ಯದರ್ಶಿ ಚೌರೀರ ಎಂ. ಪೆಮ್ಮಯ್ಯ ಸ್ವಾಗತಿಸಿ, ಸಾದೇರ ದರ್ಶನ್ ಮಾದಪ್ಪ, ಕಲ್ಪನ ಕಾರ್ಯಕ್ರಮ ನಿರೂಪಿಸಿ, ಕುಮುದ ವಂದಿಸಿದರು.