ಸೋಮವಾರಪೇಟೆ, ಜ. 18: ಜಿಲ್ಲಾ ಸಾರ್ವಜನಿಕ ಶಿಕ್ಷಣ ಇಲಾಖೆ, ಸರ್ವಶಿಕ್ಷಣ ಅಭಿಯಾನದ ವತಿಯಿಂದ ಇಲ್ಲಿಗೆ ಸಮೀಪದ ಗರಗಂದೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ರಾಷ್ಟ್ರೀಯ ಆವಿಷ್ಕಾರ ಅಭಿಯಾನ ನಡೆಸಲಾಯಿತು.

ಅಭಿಯಾನದ ಅಂಗವಾಗಿ ಶಿಕ್ಷಕರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ವಿಜ್ಞಾನ ಮತ್ತು ಗಣಿತ ವಿಷಯದಲ್ಲಿ ಸ್ವತ: ವಿವಿಧ ಮಾದರಿಗಳನ್ನು ತಯಾರಿಸಿ ಪ್ರದರ್ಶಿಸಿದರು. ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಆರ್. ನಾಗರಾಜಯ್ಯ ಮಾತನಾಡಿ, ವಿದ್ಯಾರ್ಥಿಗಳು ವಿಜ್ಞಾನ ವಿಷಯದಲ್ಲಿ ಹೆಚ್ಚಿನ ಆಸಕ್ತಿ ಬೆಳೆಸಿಕೊಂಡು ವೈಜ್ಞಾನಿಕ ಚಿಂತನೆ ರೂಢಿಸಿಕೊಳ್ಳಬೇಕೆಂದರು. ವಿಜ್ಞಾನ ಮತ್ತು ತಂತ್ರಜ್ಞಾನ ಬೆಳವಣಿಗೆಯಿಂದ ದೇಶದ ಪ್ರಗತಿ ಸಾಧ್ಯ. ಈ ದಿಶೆಯಲ್ಲಿ ಶಿಕ್ಷಕರು ಮಕ್ಕಳಲ್ಲಿ ಮೂಲ ವಿಜ್ಞಾನ ಕಲಿಕೆಯೊಂದಿಗೆ ಅವರಲ್ಲಿ ಸಂಶೋಧನಾ ಪ್ರವೃತ್ತಿ ಬೆಳೆಸಬೇಕು ಎಂದು ಹೇಳಿದರು.

ಕ್ಷೇತ್ರ ಸಮನ್ವಯಾಧಿಕಾರಿ ಮಾಲತಿ ಮಾತನಾಡಿ, ಶಿಕ್ಷಕರ ವಿಶೇಷ ಆಸಕ್ತಿ ಯಿಂದ ಮಕ್ಕಳು ಕ್ರಿಯಾಶೀಲತೆಯಿಂದ ವಸ್ತು ಪ್ರದರ್ಶನದಲ್ಲಿ ಉತ್ತಮ ಮಾದರಿಗಳನ್ನು ಪ್ರದರ್ಶಿಸಿರುವದು ಪ್ರಶಂಸನೀಯವಾದುದು. ವಿದ್ಯಾರ್ಥಿ ಗಳಲ್ಲಿನ ಸುಪ್ತ ಪ್ರತಿಭೆಗೆ ಇಂತಹ ಪ್ರದರ್ಶನ ಉತ್ತಮ ವೇದಿಕೆಯಾಗಿದೆ ಎಂದರು. ರಾಷ್ಟ್ರೀಯ ಆವಿಷ್ಕಾರ ಅಭಿಯಾನದ ಮಹತ್ವದ ಕುರಿತು, ತಾಲೂಕು ನೋಡೆಲ್ ಅಧಿಕಾರಿ ಟಿ.ಜಿ. ಪ್ರೇಮಕುಮಾರ್ ಮಾತನಾಡಿದರು. ವಿದ್ಯಾರ್ಥಿಗಳಲ್ಲಿ ವಿಜ್ಞಾನ ಮತ್ತು ಪರಿಸರಕ್ಕೆ ಸಂಬಂಧಿಸಿದ ಚಟುವಟಿಕೆ ಯಾಧಾರಿತ ಕಲಿಕೆಗೆ ಈ ಅಭಿಯಾನ ಸಹಕಾರಿಯಾಗಲಿದೆ ಎಂದರು.

ವೇದಿಕೆಯಲ್ಲಿ ಹರದೂರು ಗಾ.್ರಪಂ. ಅಧ್ಯಕ್ಷೆ ಸುಮಾ, ಎಸ್‍ಡಿಎಂಸಿ ಅಧ್ಯಕ್ಷ ಮುಸ್ತಾಫ, ಗಾ.್ರಪಂ. ಉಪಾಧ್ಯಕ್ಷೆ ಕುಸುಮಾ, ದಾನಿಗಳಾದ ಜಾನಕಿ ಪರಮೇಶ್ವರ, ಸಿ.ಆರ್.ಪಿ. ವಸಂತ್ ಮತ್ತಿತರರು ಉಪಸ್ಥಿತರಿದ್ದರು.