ಮಡಿಕೇರಿ, ಜ. 18: ಜಿಲ್ಲಾ ಪಂಚಾಯಿತಿ ಆಶ್ರಯದಲ್ಲಿ ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಮತದಾನ ದಿನಾಚರಣೆಯ ಅಂಗವಾಗಿ ಜಿಲ್ಲಾಮಟ್ಟದ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು.

ಇಲ್ಲಿನ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದ ಸ್ಪರ್ಧೆಯಲ್ಲಿ ಜಿಲ್ಲೆಯ ವಿವಿಧ ಪ್ರೌಢಶಾಲೆಗಳು, ಪದವಿ ಹಾಗೂ ಪದವಿಪೂರ್ವ ಕಾಲೇಜುಗಳಿಂದ ಸುಮಾರು 67 ವಿದ್ಯಾರ್ಥಿಗಳು ಭಾಗವಹಿಸಿದ್ದರು. ಸ್ಪರ್ಧಾ ಕಾರ್ಯಕ್ರಮವನ್ನು ಕಾಲೇಜು ಪ್ರಾಂಶುಪಾಲೆ ಚಿತ್ರಾ ಉದ್ಘಾಟಿಸಿದರು. ಡಿಡಿಪಿಐ ಭಾಗ್ಯ, ಪಿಯುಡಿಡಿ ಮೋಹನ್, ವಿಷಯ ಪರಿವೀಕ್ಷಕಿ ಸಾವಿತ್ರಿ, ಪ್ರಾಧ್ಯಾಪಕರಾದ ನಂದೀಶ್, ಚಿದಾನಂದ್ ಹಾಜರಿದ್ದರು.

ಜಿಲ್ಲಾ ಮಟ್ಟದ ಇಂದಿನ ಸ್ಪರ್ಧೆಯಲ್ಲಿ ಆಯ್ಕೆಯಾಗುವ ಸ್ಪರ್ಧಿಗಳು ರಾಜ್ಯಮಟ್ಟದಲ್ಲಿ ಭಾಗವಹಿಸಲಿದ್ದಾರೆ. ಮತದಾನಕ್ಕೆ ಸಂಬಂಧಿಸಿದಂತೆ ಇಂಗ್ಲೀಷ್ ಹಾಗೂ ಕನ್ನಡದಲ್ಲಿ ಪ್ರಬಂಧ ಭಿತ್ತಿಪತ್ರ ಹಾಗೂ ಕೊಲಾಜ್ ಸ್ಪರ್ಧೆ ಏರ್ಪಡಿಸಲಾಗಿತ್ತು.