ಮಡಿಕೇರಿ, ಜ. 18: ಮಡಿಕೇರಿ ತಾಲೂಕು ಒಕ್ಕಲಿಗರ ಸಂಘದ ವತಿಯಿಂದ ಸಂಕ್ರಾಂತಿ ಹಬ್ಬವನ್ನು ಆಚರಿಸಲಾಯಿತು. ನಗರದ ಹೊಟೇಲ್ ರಾಜ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಒಕ್ಕಲಿಗರ ಸಂಘದ ಅಧ್ಯಕ್ಷ ವಿ.ಜಿ. ಮೋಹನ್ ವಹಿಸಿದ್ದರು.

ಎಳ್ಳು ಬೆಲ್ಲವನ್ನು ಹಂಚುವ ಮೂಲಕ ಸಂಕ್ರಾಂತಿ ಹಬ್ಬದ ಮಹತ್ವದೊಂದಿಗೆ ಮುಂದಿನ ದಿನಗಳಲ್ಲಿ ಸಂಘದ ಮೂಲಕ ನಡೆಸಬೇಕಾದ ಕಾರ್ಯಚಟುವಟಿಕೆಗಳ ಕುರಿತು ಚರ್ಚಿಸಿದರು.

ಕಾರ್ಯಕ್ರಮದಲ್ಲಿ ಪ್ರಧಾನ ಕಾರ್ಯದರ್ಶಿ ಯು.ಎಂ. ಕುಶಾಲಪ್ಪ, ಜಿಲ್ಲಾ ಕಾರ್ಯದರ್ಶಿ ವಿ.ಪಿ. ಸುರೇಶ್, ಉಮೇಶ್, ಗೌರವಾಧ್ಯಕ್ಷ ಬಿ.ಡಿ. ಮಂಜುನಾಥ್, ಮೋಹನ್ ಕುಮಾರ್, ಗೋಪಿನಾಥ್, ಸಂಘಟನಾ ಕಾರ್ಯದರ್ಶಿ ವಿ.ಎ. ಮಂಜುನಾಥ್, ಸಹ ಕಾರ್ಯದರ್ಶಿ ಮನುಕುಮಾರ್, ಆನಂದ್ ಮತ್ತಿತರರು ಉಪಸ್ಥಿತರಿದ್ದರು.