ಮಡಿಕೇರಿ, ಜ. 18 : ಮೇಕೇರಿ ವಲಯ ಕಾಂಗ್ರೆಸ್ ಅಧ್ಯಕ್ಷರಾಗಿ ಚೆಟ್ಟೋಳಿರ ಪ್ರಕಾಶ್ ಪೂಣಚ್ಚ ಅವರನ್ನು ಆಯ್ಕೆ ಮಾಡಲಾಗಿದೆ.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಎಸ್. ರಮಾನಾಥ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಆಯ್ಕೆ ಮಾಡಲಾಯಿತು. ನಿರ್ಗಮಿತ ತೋರೆರ ಉದಯ್ ಅಧಿಕಾರ ಹಸ್ತಾಂತರಿಸಿದರು.
ಸಭೆಯಲ್ಲಿ ತಾ.ಪಂ. ಮಾಜಿ ಸದಸ್ಯ ಸಾಬು ತಿಮ್ಮಯ್ಯ, ಪಿಯೂಶ್ ಫೆರೇರಾ, ಸುಭಾಷ್, ನಂದ, ಮಂದ್ರಿರ ತಿಮ್ಮಯ್ಯ, ಟಿ.ಕೆ.ಹುಸೇನ್ ಮತ್ತಿತರರು ಉಪಸ್ಥಿತರಿದ್ದರು.
* ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಲ್ಪಸಂಖ್ಯಾತರ ಘಟಕದ ಮಡಿಕೇರಿ ಬ್ಲಾಕ್ ಕಾಂಗ್ರೆಸ್‍ನ ಉಪಾಧ್ಯಕ್ಷರಾಗಿ ಜೋಸೆಫ್ ಪ್ಯಾಟ್ರಿಕ್ ಲೋಬೋ ಆಯ್ಕೆಯಾಗಿದ್ದಾರೆ.