ಸೋಮವಾರಪೇಟೆ, ಜ. 18: ತೋಳೂರುಶೆಟ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಜೆಡಿಎಸ್ ಪಕ್ಷದ ವಲಯ ಮಟ್ಟದ ಕಾರ್ಯಕರ್ತರ ಸಭೆ ತಾ. 23 ರಂದು ನಡೆಯಲಿದೆ ಎಂದು ಪಕ್ಷದ ತಾಲೂಕು ವಕ್ತಾರ ಕೃಷ್ಣಪ್ಪ ತಿಳಿಸಿದ್ದಾರೆ.

ತೋಳೂರುಶೆಟ್ಟಳ್ಳಿ ಗ್ರಾಮದ ಸಮುದಾಯ ಭವನದಲ್ಲಿ ಅಂದು ಬೆಳಿಗ್ಗೆ 11 ಗಂಟೆಗೆ ಪಕ್ಷದ ಜಿಲ್ಲಾಧ್ಯಕ್ಷ ಸಂಕೇತ್ ಪೂವಯ್ಯ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ. ಸಭೆಯಲ್ಲಿ ಮಾಜಿ ಸಚಿವ ಬಿ.ಎ. ಜೀವಿಜಯ, ಕ್ಷೇತ್ರ ಸಮಿತಿ ಅಧ್ಯಕ್ಷ ಹೆಚ್.ಆರ್. ಸುರೇಶ್ ಹಾಗೂ ಪಕ್ಷದ ವಿವಿಧ ಘಟಕಗಳ ಪದಾಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ.