ಶಾಸಕ ರಂಜನ್
ಸುಂಟಿಕೊಪ್ಪ, ಜ. 18: ಯುವಕರಲ್ಲಿ ಅಡಗಿರುವ ಪ್ರತಿಭೆಯನ್ನು ಹೊರ ತರಲು ಕ್ರೀಡಾಕೂಟಗಳು ಸಹಕಾರಿ ಎಂದು ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಹೇಳಿದರು.
ಶ್ರೀಮತಿ ಡಿ ಚೆನ್ನಮ್ಮ ಪದವಿಪೂರ್ವ ಕಾಲೇಜಿನ ಮೈದಾನದಲ್ಲಿ ಗರಗಂದೂರು ಶ್ರೀ ರಾಮ್ ಕ್ರಿಕೆಟರ್ಸ್ ಸಂಘದ ವತಿಯಿಂದ ಮಕರ ಸಂಕ್ರಾತಿ ಹಬ್ಬದ ಪ್ರಯುಕ್ತ ಹಿಂದೂ ಯುವಕರ ನೇತೃತ್ವದಲ್ಲಿ ದ್ವಿತೀಯ ವರ್ಷದ ಜೈ ಶ್ರೀ ರಾಮ್ ಕಪ್ ಕ್ರಿಕೆಟ್ ಪಂದ್ಯಾಟವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಹರದೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಸುಮಾ ಚಂದ್ರ, ಮಾಜಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಎಂ.ಪಿ. ದೇವಪ್ಪ, ಸದಸ್ಯ ಎ.ಸಿ. ಸುಬ್ಬಯ್ಯ, ನಾಕೂರು-ಶಿರಂಗಾಲ ಗ್ರಾಮ ಪಂಚಾಯಿತಿ ಸದಸ್ಯ ಅಂಬೆಕಲ್ ಚಂದ್ರಶೇಖರ್, ಕಾಫಿ ಬೆಳೆಗಾರ ಕಾಳಪ್ಪ, ಭಾರತ ಮಾತಾ ಯುವಕ ಸಂಘದ ಅಧ್ಯಕ್ಷ ನಂದ ಕುಮಾರ್ ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು.