ಸುಂಟಿಕೊಪ್ಪ, ಜ. 18: ಇಲ್ಲಿನ ಮಧುರಮ್ಮ ಬಡಾವಣೆಯ ನಿವಾಸಿ ಸುಲೈಮಾನ್ ಅವರ ಪುತ್ರಿ ತಂಸೀರಾ 20 ಬುಧವಾರ ಮುಂಜಾನೆ ಮನೆಯಿಂದ ನಾಪತ್ತೆಯಾಗಿರುವ ಬಗ್ಗೆ ಸುಂಟಿಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಂಗಳವಾರ ರಾತ್ರಿ ಎಂದಿನಂತೆ ಊಟ ಮುಗಿಸಿ ಕೋಣೆಗೆ ಹೋದ ಯುವತಿ ಬುಧವಾರ ಬೆಳಗಿನ ಜಾವ 5 ಗಂಟೆಗೆ ಮನೆಯವರು ಎಬ್ಬಿಸಲು ಬಂದಾಗ ನಾಪತ್ತೆಯಾಗಿರುವದು ಬೆಳಕಿಗೆ ಬಂದಿದೆ. ಈ ಸಂಬಂಧ ಸುಂಟಿಕೊಪ್ಪ ಪೊಲೀಸ್ ಠಾಣೆಯಲ್ಲಿ ಯುವತಿಯ ತಂದೆ ಸುಲೈಮಾನ್ ದೂರು ನೀಡಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಕುಶಾಲನಗರ ಡಿವೈಎಸ್‍ಪಿ ಮುರುಳೀಧರ್ ಮಾರ್ಗದರ್ಶನದಲ್ಲಿ ಸುಂಟಿಕೊಪ್ಪ ಪಿಎಸ್‍ಐ ಜಯರಾಂ ಅವರ ನೇತೃತ್ವದಲ್ಲಿ ತನಿಖೆ ನಡೆಯುತ್ತಿದೆ.