ಮಡಿಕೇರಿ, ಜ.19 : ಕರ್ನಾಟಕ ದಲಿತ ಸಂಘರ್ಷ ಸಮಿತಿ ಹಾಗೂ ಪ್ರಬುದ್ಧ ನೌಕರರ ಒಕ್ಕೂಟದ ಆಶ್ರಯದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಯ ಪೂರ್ವಭಾವಿ ಸಿದ್ಧತೆ ಬಗ್ಗೆ ದಲಿತ ವಿದ್ಯಾರ್ಥಿಗಳಿಗೆ ಕಾರ್ಯಾಗಾರ ತಾ. 21ರಂದು (ನಾಳೆ) ಬೆಳಿಗ್ಗೆ 11 ಗಂಟೆಗೆ ನಗರದ ಜೂನಿಯರ್ ಕಾಲೇಜಿನ ಕಾರ್ಯಪ್ಪ ಸಭಾಂಗಣದಲ್ಲಿ ನಡೆಯಲಿದೆ. ಜಿಲ್ಲಾಧಿಕಾರಿ ಪಿ.ಐ. ಶ್ರೀವಿದ್ಯಾ ಉದ್ಘಾಟನೆ ಮಾಡಲಿದ್ದು, ಜಿಲ್ಲಾಸ್ಪತ್ರೆ ಉಪವೈದ್ಯಾಧಿಕಾರಿ ಹೆಚ್.ವಿ. ದೇವದಾಸ್ ಅಧ್ಯಕ್ಷತೆ ವಹಿಸಲಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ. ರಾಜೇಂದ್ರ ಪ್ರಸಾದ್ ಸೇರಿದಂತೆ ಇತರರು ಪಾಲ್ಗೊಳ್ಳಲಿದ್ದಾರೆ.