ಸಿದ್ದಾಪುರ, ಜ. 22: ಅರಣ್ಯ ಇಲಾಖೆ ವತಿಯಿಂದ ಪರಿಶಿಷ್ಟ ಪಂಗಡದ ಅರ್ಹ ಫಲಾನುಭವಿಗಳಿಗೆ ಅಡುಗೆ ಅನಿಲ ಸಂಪರ್ಕ ವಿತರಿಸಲಾಯಿತು.

ನೆಲ್ಲಿಹುದಿಕೇರಿ, ವಾಲ್ನೂರು ಹಾಗೂ ನಂಜರಾಯಪಟ್ಟಣ ವ್ಯಾಪ್ತಿಯ ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ ಅಡುಗೆ ಅನಿಲ ವಿತರಿಸಲಾಯಿತು.

ಈ ಸಂದರ್ಭ ಜಿ.ಪಂ. ಸದಸ್ಯೆ ಸುನಿತಾ ಮಂಜುನಾಥ್, ತಾ.ಪಂ. ಸದಸ್ಯೆ ಸುಹದಾ ಅಶ್ರಫ್, ಉಪವಲಯ ಅರಣ್ಯಾಧಿಕಾರಿ ಬಾನಂಡ ದೇವಿಪ್ರಸಾದ್, ಗ್ರಾ.ಪಂ. ಸದಸ್ಯರು, ಅರಣ್ಯ ಇಲಾಖೆ ಸಿಬ್ಬಂದಿಗಳು ಹಾಜರಿದ್ದರು.