ನಾಪೆÉÇೀಕ್ಲು, ಜ. 22: ಸುಮಾರು 54 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಲು ಉದ್ದೇಶಿಸಿರುವ ನಾಪೆÇೀಕ್ಲು ಪದವಿ ಪೂರ್ವ ಕಾಲೇಜಿನ ನೂತನ ಕಟ್ಟಡಕ್ಕೆ ವೀರಾಜಪೇಟೆ ವಿಧಾನ ಸಭಾ ಕ್ಷೇತ್ರದ ಶಾಸಕ ಕೆ.ಜಿ. ಬೋಪಯ್ಯ ಭೂಮಿ ಪೂಜೆ ನೆರವೇರಿಸಿದರು. ನಂತರ ಮಾತನಾಡಿದ ಅವರು ಬ್ರಿಟೀಷರ ಕಾಲದಲ್ಲಿ ಗ್ರಾಮದ ವಿದ್ಯಾಭಿಮಾನಿಗಳು ಶಾಲೆ ನಿರ್ಮಿಸಲು ಸುಮಾರು 54 ಏಕ್ರೆ ಜಾಗವನ್ನು ಉದಾರವಾಗಿ ನೀಡಿದ್ದಾರೆ. ಹಿಂದೆ ಇಲ್ಲಿ ಸುಸಜ್ಜಿತ ಕಟ್ಟಡ ನಿರ್ಮಿಸಲಾಗಿದೆ. ಆದರೆ ಪದವಿ ಪೂರ್ವ ಕಾಲೇಜಿನ ತರಗತಿ ಕೊಠಡಿ ಮತ್ತು ಶೌಚಾಲಯದ ಕೊರತೆ ನೀಗಿಸಲು ನಬಾರ್ಡ್ ವತಿಯಿಂದ 54 ಲಕ್ಷ ರೂ. ಮಂಜೂರಾಗಿದ್ದು ಶೀಘ್ರವೇ ಕಾಮಗಾರಿಯನ್ನು ಆರಂಭಿಸಲಾಗುವದು ಎಂದು ಹೇಳಿದರು.

ಜಿ. ಪ. ಸದಸ್ಯ ಪಾಡಿಯಮ್ಮಂಡ ಮುರಳಿ ಕರುಂಬಮ್ಮಯ್ಯ, ತಾಲೂಕು ಪಂಚಾಯಿತಿ ಅಧ್ಯಕ್ಷೆ ತೆಕ್ಕಡೆ ಶೋಭಾ ಮೋಹನ್, ಉಪಾಧ್ಯಕ್ಷ ಸಂತು ಸುಬ್ರಮಣಿ, ಮಡಿಕೇರಿ ಜನತಾ ಬಜಾರ್ ಅಧ್ಯಕ್ಷ ರವಿ ಬಸಪ್ಪ, ಬೆಲ್ಲು ಸೋಮಯ್ಯ, ತಾಲೂಕು ಪಂಚಾಯಿತಿ ಸದಸ್ಯೆ ಉಮಾ ಪ್ರಭು, ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ ಕರವಂಡ ಲವ ನಾಣಯ್ಯ, ಸದಸ್ಯ ಚೋಕಿರ ಪ್ರಭು ಪೂವಪ್ಪ, ಬಿ.ಜೆ.ಪಿ. ವಲಯ ಅಧ್ಯಕ್ಷ ಶಿವಚಾಳಿಯಂಡ ಅಂಬಿ ಕಾರ್ಯಪ್ಪ ಮತ್ತಿತರರು ಇದ್ದರು.