ಮಡಿಕೇರಿ, ಜ. 22: ದೇಶದ ಮಹಾನ್ ಪ್ರಥಮ ದಂಡನಾಯಕ ಫೀಲ್ಡ್ ಮಾರ್ಷಲ್ ಕಾರ್ಯಪ್ಪನವರ 119ನೇ ಜನ್ಮ ದಿನಾಚರಣೆ ಕಾರ್ಯಕ್ರಮದ ಪ್ರಯುಕ್ತ ಪ್ರಾಥಮಿಕ, ಪ್ರೌಢ ಶಾಲೆ, ಪದವಿಪೂರ್ವ ಹಾಗೂ ಪದವಿ ಕಾಲೇಜು ಮಟ್ಟದ ವಿದ್ಯಾರ್ಥಿಗಳಿಗೆ ರಾಷ್ಟ್ರಗೀತೆ ಸ್ಪರ್ಧೆಯನ್ನು ತಾ. 27 ರಂದು ಬೆಳಿಗ್ಗೆ 9 ಗಂಟೆಗೆ ಕೋಟೆ ಆವರಣದಲ್ಲಿ ಏರ್ಪಡಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

ರಾಷ್ಟ್ರಗೀತೆ ಸ್ಪರ್ಧೆಯು ಸಾಮೂಹಿಕ ಕಾರ್ಯಕ್ರಮವಾಗಿದ್ದು, ಒಂದು ಕಾಲೇಜಿನಿಂದ ಒಂದು ತಂಡ ಮಾತ್ರ ಭಾಗವಹಿಸಬಹುದಾಗಿದೆ. ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಪ್ರಥಮ, ದ್ವಿತೀಯ ಹಾಗೂ ತೃತೀಯ ಬಹುಮಾನಗಳನ್ನು ಪ್ರತಿ ವಿಭಾಗದಲ್ಲಿ ನೀಡಲಾಗುವದು. ಆದ್ದರಿಂದ ಶಾಲಾ-ಕಾಲೇಜು ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲು ಕೋರಿದ್ದಾರೆ.

ರಾಷ್ಟ್ರಗೀತೆ ಸ್ಪರ್ಧೆಯಲ್ಲಿ ಭಾಗವಹಿಸಲು ಇಚ್ಚಿಸುವವರು ತಾ. 27 ರಂದು ಬೆಳಿಗ್ಗೆ 9 ಗಂಟೆಗೆ ಕೋಟೆ ಆವರಣದಲ್ಲಿ ಹೆಸರನ್ನು ನೋಂದಾಯಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗೆ ಸಹಾಯಕ ನಿರ್ದೇಶಕರ ಕಚೇರಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಮಡಿಕೇರಿ ಅಥವಾ 08272-228490 ಸಂಪರ್ಕಿಸಲು ಕೋರಿದೆ.