ಮಡಿಕೇರಿ, ಜ. 23: ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತಂದೇ ತೀರುವ ಏಕೈಕ ಉದ್ದೇಶದಿಂದ ರಾಜ್ಯದಾದ್ಯಂತ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ಹಮ್ಮಿಕೊಂಡಿರುವ ಪರಿವರ್ತನಾ ಯಾತ್ರೆ ತಾ. 24 ರಂದು (ಇಂದು) ಮಡಿಕೇರಿಗೆ ಆಗಮಿಸುತ್ತಿದ್ದು, ಸಮಾವೇಶ ನಡೆಯುವ ಗಾಂಧಿ ಮೈದಾನದಲ್ಲಿ ಸಿದ್ಧತೆ ನಡೆದಿದೆ.ಅತ್ಯಧಿಕ ಕಾರ್ಯಕರ್ತರು ಸೇರುವ ನಿರೀಕ್ಷೆಯಿದ್ದು, ವೇದಿಕೆ ಹಾಗೂ ಕಾರ್ಯಕರ್ತರಿಗೆ ಕುಳಿತುಕೊಳ್ಳಲು ಆಸನ ಮತ್ತು ಶಾಮಿಯಾನದ ವ್ಯವಸ್ಥೆ ಮಾಡಲಾಗಿದೆ. ಸಮಾವೇಶದಲ್ಲಿ ರಾಜ್ಯ ಹಾಗೂ ರಾಷ್ಟ್ರೀಯ ಪ್ರಮುಖರು ಭಾಗವಹಿಸಿ ಭಾಷಣ ಮಾಡಲಿದ್ದಾರೆ ಎಂದು ಜಿಲ್ಲಾ ಬಿಜೆಪಿ ಪ್ರಮುಖರು ತಿಳಿಸಿದ್ದಾರೆ.