ವೀರಾಜಪೇಟೆ, ಜ. 23: ಅಮ್ಮತ್ತಿ-ಒಂಟಿಅಂಗಡಿಯ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯ ವಾರ್ಷಿಕೋತ್ಸವ ಇತ್ತೀಚೆಗೆ ನಡೆಯಿತು. ವಾರ್ಷಿಕೋತ್ಸವದ ಅಂಗವಾಗಿ ನಡೆದ ಕ್ರೀಡಾಕೂಟವನ್ನು ಕಣ್ಣಂಗಾಲ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ವಿ.ಎನ್. ಮನೋಜ್ ಉದ್ಘಾಟಿಸಿದರು.
ವಾರ್ಷಿಕೋತ್ಸವ ಸಮಾರಂಭವನ್ನು ಜಿಲ್ಲಾ ಪಂಚಾಯಿತಿ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ ಮೂಕೊಂಡ ಶಶಿ ಸುಬ್ರಮಣಿ ಉದ್ಘಾಟಿಸಿದರು. ವೀರಾಜಪೇಟೆ ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಎ. ಲೋಕೇಶ್ ಅಧ್ಯಕ್ಷತೆ ವಹಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ಕ್ಷೇತ್ರ ಸಂಪನ್ಮೂಲ ಸಮನ್ವಯ ಅಧಿಕಾರಿ ಎಸ್.ಪಿ. ಮಹದೇವ, ವೀರಾಜಪೇಟೆ ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕಿ ಪಿ.ಡಿ. ರತಿ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾಧ್ಯಕ್ಷ ಹೆಚ್.ಎಸ್. ಚೇತನ್, ತಾಲೂಕು ಅಧ್ಯಕ್ಷ ಸುರೇಂದ್ರ , ಕಣ್ಣಂಗಾಲ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಈಶ್ವರಿ, ಕ್ಷೇತ್ರ ಸಂಪನ್ಮೂಲ ವ್ಯಕ್ತಿಗಳಾದ ಜೈಸಿ ಜೋಸೆಫ್, ಸುಶ ಮುಖ್ಯ ಅತಿಥಿಗಳಾಗಿದ್ದರು. ಸಹ ಶಿಕ್ಷಕ ಎ.ವಿ. ಮಂಜುನಾಥ್ ಶಾಲಾ ವರದಿಯನ್ನು ಮಂಡಿಸಿದರು. ಮುಖ್ಯ ಶಿಕ್ಷಕಿ ಲಿಲ್ಲಿ ಸ್ವಾಗತಿಸಿ, ಕೆ.ಪಿ. ಮಂಜುನಾಥ್ ವಂದಿಸಿದರು. ರಾಜ್ಯ ಪ್ರಶಸ್ತಿ ವಿಜೇತ ಚಿತ್ರಕಲಾ ಶಿಕ್ಷಕ ಬಿ.ಆರ್. ಸತೀಶ್ ಅವರಿಂದ ಕುಂಚ ರಚನೆ ಮೂಲಕ ಕಾರ್ಯಕ್ರಮಗಳಿಗೆ ಚಾಲನೆ ದೊರೆಯಿತು. ವಾರ್ಷಿಕೋತ್ಸವದ ಅಂಗವಾಗಿ ನಡೆದ ಕ್ರೀಡಾ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆ ನಡೆಯಿತು. ವಿದ್ಯಾರ್ಥಿಗಳಿಗೆ ವಿವಿಧ ಸಾಂಸ್ಕøತಿಕ ಕಾರ್ಯಕ್ರಮ ಏರ್ಪಡಿಸಲಾಗಿತ್ತು.