ಚೆಟ್ಟಳ್ಳಿ, ಜ. 23: ಚೆಟ್ಟಳ್ಳಿ ಆರೋಗ್ಯ ಕೇಂದ್ರಕ್ಕೆ ಎಂಬಿಬಿಎಸ್ ವೈದ್ಯರನ್ನು ನೇಮಕ ಮಾಡಬೇಕೆಂಬ ಸಾರ್ವಜನಿಕರ ಒತ್ತಾಯದ ಮೇರೆಗೆ ವೈದ್ಯರನ್ನು ನೇಮಕ ಮಾಡಲಾಯಿತು.

ಚೆಟ್ಟಳ್ಳಿಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ವೈದ್ಯಾಧಿಕಾರಿ ಡಾ. ಯಶೋದ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ನಡೆದ ಸಭೆಯಲ್ಲಿ ನೂತನವಾಗಿ ಆಯ್ಕೆಗೊಂಡ ವೈದ್ಯಾಧಿಕಾರಿ ಡಾ. ಅಹಮದ್ ಶಹಾಬ್ ಸ್ವಾಗತಿಸಲಾಯಿತು.

ಜಿಲ್ಲಾ ಪಂಚಾಯಿತಿ ಸದಸ್ಯೆ ಸುನಿತ, ಗ್ರಾಮ ಪಂಚಾಯಿತಿ ಸದಸ್ಯರಾದ ಮಹಮದ್ ರಫಿ, ಶಶಿಕುಮಾರ್, ಆರೋಗ್ಯರಕ್ಷಾ ಸಮಿತಿಯ ಸದಸ್ಯ ಹಾಗೂ ಜಿಲ್ಲಾ ಕಾಂಗ್ರೆಸ್ ವಕ್ತಾರ ಪುತ್ತರಿರ ಪಪ್ಪು ತಿಮ್ಮಯ್ಯ, ಆರೋಗ್ಯಕೇಂದ್ರದ ಸಿಬ್ಬಂದಿಗಳು ಹಾಗೂ ಸಾರ್ವಜನಿಕರು ಹಾಜರಿದ್ದರು.