ಮಡಿಕೇರಿ, ಜ. 23: ಮತದಾರರ ಪಟ್ಟಿ ಸಂಬಂಧಿಸಿದಂತೆ ರಾಜಕೀಯ ಪಕ್ಷಗಳ ಪ್ರಮುಖರೊಂದಿಗೆ ಮತದಾರರ ಪಟ್ಟಿ ವೀಕ್ಷಕರು ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತ ಪಿ.ಸಿ. ಜಾಫರ್ ಸಮಾಲೋಚನೆ ನಡೆಸಿದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಮತದಾರರ ಪಟ್ಟಿ ಪರಿಷ್ಕರಣೆ ಸಂಬಂಧ ರಾಜಕೀಯ ಮುಖಂಡ ರಿಂದ ಮಾಹಿತಿ ಪಡೆದರು. ಬಳಿಕ ಮಾತಾನಾಡಿದ ಅವರು, ಮತದಾರರ ಪಟ್ಟಿ ಪರಿಷ್ಕರಣಾ ಕಾರ್ಯವು ನಿರಂತರ ಪ್ರಕ್ರಿಯೆಯಾಗಿದ್ದರೂ ಸಹ, ವಿಧಾನಸಭಾ ಚುನಾವಣೆ ಹಿನ್ನೆಲೆ ಮತದಾರರ ಪಟ್ಟಿ ಪರಿಷ್ಕರಣೆ ಸಂಬಂಧಿಸಿದಂತೆ ಮತದಾರರ ಪಟ್ಟಿ ಸೇರ್ಪಡೆ ಸಂಬಂಧ ಈಗಾಗಲೇ ತಾ. 22 ರವರೆಗೆ ಕಾಲಾವಕಾಶ ನೀಡಲಾಗಿತ್ತು. ಈ ಸಂಬಂಧ ಮಾಹಿತಿ ಪಡೆಯುತ್ತಿರುವದಾಗಿ ಹೇಳಿದರು.

ವಿವಿಧ ರಾಜಕೀಯ ಪಕ್ಷಗಳ ಪ್ರಮುಖರು ಮತದಾರರ ಪಟ್ಟಿ ಮತ್ತಿತರ ಬಗ್ಗೆ ಹಲವು ಮಾಹಿತಿ ನೀಡಿದರು. ಜಿಲ್ಲಾಧಿಕಾರಿ ಪಿ.ಐ ಶ್ರೀವಿದ್ಯಾ, ಜಿ.ಪಂ. ಸಿ.ಇ.ಓ. ಪ್ರಶಾಂತ್ ಕುಮಾರ್ ಮಿಶ್ರ, ಉಪ ವಿಭಾಗಾಧಿಕಾರಿ ಡಾ. ನಂಜುಂಡೇ ಗೌಡ, ತಹಶೀಲ್ದಾರರಾದ ಕುಸುಮಾ, ಗೋವಿಂದರಾಜು, ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ವಿ.ಪಿ. ಸುರೇಶ್, ಪ್ರಭು, ಭಾರತೀಯ ಜನತಾ ಪಕ್ಷದ ಸಾಮಾಜಿಕ ಜಾಲತಾಣದ ಜಿಲ್ಲಾ ಸಂಚಾಲಕ ಕೆ.ಎಂ. ಅಪ್ಪಣ್ಣ, ಜೆಡಿಎಸ್ ನಗರ ಕಾರ್ಯದರ್ಶಿ ಮಹಮದ್ ಅಬ್ರಾರ್, ಚುನಾವಣಾ ಶಿರಸೆûದಾರ ಪ್ರಕಾಶ್, ಅನಿಲ್ ಕುಮಾರ್ ಇತರರು ಇದ್ದರು.