ಗೋಣಿಕೊಪ್ಪ ವರದಿ, ಜ. 23: ಮಂಗಳೂರಿನಲ್ಲಿ ನಡೆದ ಮಂಗಳೂರು ವಿಶ್ವ ವಿದ್ಯಾನಿಲಯ ಮಟ್ಟದ ಅಂತರ ಕಾಲೇಜು ಅಥ್ಲೆಟಿಕ್ಸ್‍ನಲ್ಲಿ ಗೋಣಿಕೊಪ್ಪ ಕಾವೇರಿ ಕಾಲೇಜಿನ ಆರ್. ರಾಧಾಕೃಷ್ಣ ಲಾಂಗ್ ಜಂಪ್ ವಿಭಾಗದಲ್ಲಿ ಸ್ವರ್ಣ ಪದಕ ಹಾಗೂ 100 ಮೀಟರ್ ಓಟದ ಸ್ಪರ್ಧೆಯಲ್ಲಿ ಕಂಚಿನ ಪದಕ ಪಡೆದು ಕೊಂಡಿದ್ದಾರೆ. ಡಿಸ್ಕಸ್ ಥ್ರೋ ವಿಭಾಗದಲ್ಲಿ ತನುಷ್ ರಾಬಿನ್ಸ್ ಕಂಚಿನ ಪದಕ ಪಡೆದು ಕೊಂಡಿದ್ದಾರೆ.