ಸೋಮವಾರಪೇಟೆ, ಜ. 23: ರಾಷ್ಟ್ರೀಯ ಆವಿಷ್ಕಾರ ಅಭಿಯಾನದ ಅಂಗವಾಗಿ ಶನಿವಾರಸಂತೆ ಸಮೀಪದ ತ್ಯಾಗರಾಜ ಕಾಲೋನಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಜ್ಞಾನ-ಗಣಿತ ವಸ್ತು ಪ್ರದರ್ಶನ ಆಯೋಜಿಸಲಾಗಿತ್ತು. ನೂತನ ಆವಿಷ್ಕಾರಗಳಲ್ಲಿ ವಿದ್ಯಾರ್ಥಿಗಳು ಹೆಚ್ಚಿನ ಆಸಕ್ತಿಯಿಂದ ಭಾಗವಹಿಸಿದ್ದರು. ಸೋಲಾರ್ ಲೈಟ್‍ಗಳು, ಸ್ವಯಂ ಚಾಲಿತ ಯಂತ್ರಗಳು, ವಿದ್ಯುತ್ ಉತ್ಪಾದನಾ ಘಟಕಗಳು, ಮಳೆ ಕೊಯ್ಲು ಘಟಕ ಸೇರಿದಂತೆ ಹತ್ತು ಹಲವು ಪ್ರಾಕಾರಗಳನ್ನು ರಚಿಸಿ ತಮ್ಮ ಬುದ್ಧಿಮತ್ತೆಯನ್ನು ಪ್ರದರ್ಶಿಸಿದರು.