ಸೋಮವಾರಪೇಟೆ, ಜ. 23: ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ 69ನೇ ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಆಚರಿಸಲು ತೀರ್ಮಾನಿಸಲಾಯಿತು. ತಹಶೀಲ್ದಾರ್ ಅಧ್ಯಕ್ಷತೆಯಲ್ಲಿ ತಾಲೂಕು ಕಚೇರಿ ಸಭಾಂಗಣದಲ್ಲಿ ಗಣರಾಜ್ಯೋತ್ಸವಕ್ಕೆ ಸಂಬಂಧಿಸಿದಂತೆ ಪೂರ್ವಭಾವಿ ಸಭೆ ನಡೆಯಿತು. ಸಮಾರಂಭದಂದು ಶಾಲಾ ವಿದ್ಯಾರ್ಥಿಗಳಿಗೆ ಸಾಂಸ್ಕøತಿಕ ಕಾರ್ಯಕ್ರಮ, ಪೊಲೀಸ್, ಎನ್‍ಸಿಸಿ, ಸ್ಕೌಟ್ಸ್ ಮತ್ತು ಗೈಡ್ಸ್‍ರವರಿಂದ ಪಥಸಂಚಲನ ನಡೆಸುವಂತೆ ತೀರ್ಮಾನಿಸಲಾಯಿತು. ಮಾಜಿ ಯೋಧರು ಹಾಗೂ ಸಮಾಜ ಸೇವಕರೊಬ್ಬರಿಗೆ ಸನ್ಮಾನಿಸುವಂತೆ ನಿರ್ಧರಿಸಲಾಯಿತು.

ಸಭೆಯಲ್ಲಿ ತಾಲೂಕು ಪಂಚಾಯಿತಿ ಉಪಾಧ್ಯಕ್ಷ ಎಂ.ಬಿ. ಅಭಿಮನ್ಯು ಕುಮಾರ್ ಸೇರಿದಂತೆ ವಿವಿಧ ಇಲಾಖಾಧಿಕಾರಿಗಳು ಪಾಲ್ಗೊಂಡಿದ್ದರು.