ಮಡಿಕೇರಿ, ಜ. 25: ಜಿಲ್ಲಾಡಳಿತ ವತಿಯಿಂದ ಗಣರಾಜ್ಯೋತ್ಸವ ದಿನಾಚರಣೆಯು ತಾ.26 ರಂದು (ಇಂದು) ಬೆಳಗ್ಗೆ 9 ಗಂಟೆಗೆ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ.
ಜಿಲ್ಲಾ ಉಸ್ತುವಾರಿ ಸಚಿವರಾದ ಎಂ.ಆರ್.ಸೀತಾರಾಂ ಅವರು ಧ್ವಜಾರೋಹಣ ನೆರವೇರಿಸಲಿದ್ದಾರೆ. ಶಾಸಕರಾದ ಎಂ.ಪಿ.ಅಪ್ಪಚ್ಚು ರಂಜನ್ ಅವರು ಅಧ್ಯಕ್ಷತೆ ವಹಿಸಲಿದ್ದಾರೆ.