ಚೆಟ್ಟಳ್ಳಿ, ಜ. 24: ಇಲ್ಲಿನ ಪ್ರಾಥಮಿಕ ಶಾಲೆಯ ಆವರಣದಲ್ಲಿ ಗೋಣಿಕೊಪ್ಪಲು ಕಾವೇರಿ ಕಾಲೇಜಿನ ಎನ್.ಎಸ್.ಎಸ್. ಶಿಬಿರವನ್ನು ಶಾಸಕ ಅಪ್ಪಚ್ಚು ರಂಜನ್ ಉದ್ಘಾಟಿಸಿದರು. ಎರಡು ವಾರಗಳ ಕಾಲ ನಡೆಯುವ ಶಿಬಿರದ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಚೆಟ್ಟಳ್ಳಿ ಗ್ರಾ.ಪಂ. ಅಧ್ಯಕ್ಷೆ ವತ್ಸಲ ಭಾಗವಹಿಸಿ ವಿದ್ಯಾರ್ಥಿಗಳಿಗೆ ಹಿತನುಡಿಗಳನಾಡಿದರು. ಸಮಾರಂಭದಲ್ಲಿ ಜಿ.ಪಂ. ಸದಸ್ಯೆ ಸುನಿತಾ ಮಂಜುನಾಥ್, ಗ್ರಾಮಸ್ಥರಾದ ಬಟ್ಟೀರಾ ಕಾಳಪ್ಪ, ಬಿದ್ದಂಡ ಮಾಧಯ್ಯ, ಗೋಣಿಕೊಪ್ಪ ಕಾವೇರಿ ಕಾಲೇಜಿನ ಪ್ರಾಂಶುಪಾಲರು, ವರ್ತಕರಾದ ಗೌತಮ್, ಬಲ್ಲಾರಂಡ ಮಣಿ ಉತ್ತಪ್ಪ, ಕರ್ನಾಟಕ ಕೊಡವ ಸಾಹಿತ್ಯ ಅಕಾಡಮಿ ಸದಸ್ಯ ಮದೋಶ್ ಪೂವಯ್ಯ ಭಾಗವಹಿಸಿದ್ದರು.