ಸೋಮವಾರಪೇಟೆ,ಜ.24: ಸಮೀಪದ ನೇರುಗಳಲೆ-ಅಬ್ಬೂರುಕಟ್ಟೆ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ದಶಮಾನೋತ್ಸವ ಸಮಾರಂಭ ಹಾಗೂ ಗಣರಾಜ್ಯೋತ್ಸವ ಆಚರಣೆ ತಾ. 26ರಂದು ನಡೆಯಲಿದೆ ಎಂದು ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ವಿ.ಎಸ್. ಚಂದ್ರಶೇಖರ್ ತಿಳಿಸಿದ್ದಾರೆ.

ಸರ್ಕಾರಿ ಮಾದರಿ ಪ್ರಾಥಮಿಕ ಮತ್ತು ಪ್ರೌಢಶಾಲೆ ಹಾಗೂ ವಿವಿಧ ಸಂಘ ಸಂಸ್ಥೆಗಳು, ಸಾರ್ವಜನಿಕರು, ಗ್ರಾಮಸ್ಥರ ಸಹಯೋಗದೊಂದಿಗೆ ಕಾರ್ಯಕ್ರಮ ಆಯೋಜಿಸಲಾಗಿದ್ದು, ತಾ. 26ರಂದು ಬೆಳಿಗ್ಗೆ 9.30ಕ್ಕೆ ಸ.ಮಾ.ಪ್ರಾ. ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ರಾಧಾಕೃಷ್ಣ ರೈ ಧ್ವಜಾರೋಹಣ ಮಾಡಲಿದ್ದಾರೆ. ವಿದ್ಯಾರ್ಥಿಗಳಿಗೆ ಆಯೋಜಿಸಲಾಗಿರುವ ಆಟೋಟ ಸ್ಪರ್ಧೆಗೆ ಪೋಷಕರ ಸಮಿತಿ ಅಧ್ಯಕ್ಷ ಎಸ್.ಎಸ್. ಸೋಮಶೇಖರ್ ಚಾಲನೆ ನೀಡಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.

ದಶಮಾನೋತ್ಸವ ಅಂಗವಾಗಿ ಸಾರ್ವಜನಿಕರಿಗೆ ಆಯೋಜಿಸ ಲಾಗಿರುವ ಆಟೋಟ ಸ್ಪರ್ಧೆಗಳಿಗೆ ತಾ.ಪಂ. ಮಾಜಿ ಅಧ್ಯಕ್ಷ ಎಸ್.ಎಂ. ಡಿಸಿಲ್ವಾ ಚಾಲನೆ ನೀಡಲಿದ್ದು, ಪೋಷಕರ ಸಮಿತಿಯ ಕಾರ್ಯದರ್ಶಿ ಪದ್ಮಾವತಿ, ಎಸ್‍ಡಿಎಂಸಿ ಉಪಾಧ್ಯಕ್ಷೆ ಭುವನೇಶ್ವರಿ ಸೇರಿದಂತೆ ಇತರರು ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಅಪರಾಹ್ನ 3.30ಕ್ಕೆ ಸಮಾರೋಪ ಸಮಾರಂಭ ನಡೆಯಲಿದ್ದು, ಶಾಸಕ ಎಂ.ಪಿ. ಅಪ್ಪಚ್ಚು ರಂಜನ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಗ್ರಾ.ಪಂ. ಅಧ್ಯಕ್ಷ ಎ.ಹೆಚ್. ತಿಮ್ಮಯ್ಯ, ಮಾಜಿ ಸಚಿವ ಬಿ.ಎ. ಜೀವಿಜಯ, ಜಿ.ಪಂ. ಸದಸ್ಯೆ ಪೂರ್ಣಿಮಾ ಗೋಪಾಲ್, ತಾ.ಪಂ. ಸದಸ್ಯೆ ಸವಿತಾ ಈರಪ್ಪ, ಜಿ.ಪಂ. ಮಾಜಿ ಅಧ್ಯಕ್ಷ ವಿ.ಎಂ. ವಿಜಯ ಸೇರಿದಂತೆ ಇತರರು ಭಾಗವಹಿಸಲಿದ್ದಾರೆ ಎಂದು ಚಂದ್ರಶೇಖರ್ ತಿಳಿಸಿದ್ದಾರೆ.