ಮಡಿಕೇರಿ, ಜ. 24: ನಗರದ ವಿಕಾಸ್ ಜನಸೇವಾ ಟ್ರಸ್ಟ್ ವತಿಯಿಂದ ಗಣರಾಜ್ಯೋತ್ಸವ, ಬ್ರೈಲ್ ದಿನಾಚರಣೆ ಮತ್ತು ಟ್ರಸ್ಟ್‍ನ ದ್ವಿತೀಯ ವಾರ್ಷಿಕೋತ್ಸವ ಕಾರ್ಯಕ್ರಮ ತಾ. 26 ರಂದು ಬೆಳಿಗ್ಗೆ 10 ಗಂಟೆಗೆ ವಿಕಾಸ್ ಜನಸೇವಾ ಟ್ರಸ್ಟ್ ಮುಂಭಾಗ ಕಾನ್ವೆಂಟ್ ಜಂಕ್ಷನ್‍ನಲ್ಲಿ ನಡೆಯಲಿದೆ. ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ ಬೋಧಕ ಆಸ್ಪತ್ರೆ ಮುಖ್ಯಸ್ಥ ಡಾ. ಬಿ.ಜೆ. ಮಹೇಂದ್ರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಜಿ.ಪಂ. ಅಧ್ಯಕ್ಷ ಬಿ.ಎ. ಹರೀಶ್ ಉದ್ಘಾಟನೆ ಮಾಡಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಉದ್ಯಮಿ ಮತ್ತು ರಾಜ್ಯ ಉಪಾಧ್ಯಕ್ಷ ಐ.ಎನ್.ಟಿ.ಯು.ಸಿ. ನಾಪಂಡ ಮುತ್ತಪ್ಪ, ನಗರಸಭೆ ಆಯುಕ್ತೆ ಶುಭ, ಜಿಲ್ಲಾ ವಿಕಲಚೇತನರ ಮತ್ತು ಹಿರಿಯನಾಗರಿಕ ಕಲ್ಯಾಣಾಧಿಕಾರಿ ದೇವರಾಜು ಎನ್.ಎ., ಟ್ರಾಫಿಕ್ ಪೊಲೀಸ್ ಠಾಣೆಯ ಸಹಾಯಕ ಠಾಣಾಧಿಕಾರಿ ಗೋವಿಂದರಾಜು ಹೆಚ್.ಸಿ., ತಹಶೀಲ್ದಾರ್ ಕುಸುಮ, ಬಾಲಕಿಯರ ಬಾಲಮಂದಿರ ಅಧೀಕ್ಷಕಿ ಮಮ್ತಾಜ್, ಶಿಶು ಅಭಿವೃದ್ಧಿ ಯೋಜನಾಧಿಕಾರಿ ದಮಯಂತಿ, ಸಹಾಯಕ ಶಿಶು ಸಂಯೋಜನಾಧಿಕಾರಿ ಸವಿತಾ ಸಿ.ಪಿ., ಕೊಡಗು ಜಿಲ್ಲಾಸ್ಪತ್ರೆಯ ಉಪ ಮುಖ್ಯ ವೈದ್ಯಾಧಿಕಾರಿ ಡಾ. ದೇವದಾಸ್, ಶಸ್ತ್ರ ಚಿಕಿತ್ಸಾ ವಿಭಾಗದ ಸಹ ಪ್ರಾಧ್ಯಾಪಕ ಡಾ. ಅಜಿತ್ ಕುಮಾರ್, ಸ್ಮಿತಾ ಐ ಕೇರ್ ಕಣ್ಣಿನ ವೈದ್ಯರಾದ ಡಾ. ಪ್ರಶಾಂತ್, ಸುಂಟಿಕೊಪ್ಪ ಸ್ವಸ್ಥ ವಿಶೇಷ ಶಾಲೆಯ ನಿರ್ದೇಶಕರಾದ ಆರತಿ ಸೋಮಯ್ಯ, ಲಯನ್ಸ್ ಕ್ಲಬ್ ಅಧ್ಯಕ್ಷ ಕನ್ನಂಡ ಎ. ಬೊಳ್ಳಪ್ಪ, ಹಿರಿಯ ನಾಗರಿಕರ ಫೋರಂ ಅಧ್ಯಕ್ಷ ಜಿ.ಟಿ. ರಾಘವೇಂದ್ರ, ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷೆ ಸುರಯ್ಯ ಅಬ್ರಾರ್, ಜಿ.ಪಂ. ಮಾಜಿ ಅಧ್ಯಕ್ಷ ಧೀರ್ಘಕೇಶಿ, ಪಂಚಾಯಿತಿ ಸದಸ್ಯರು, ಆಟೋ ಚಾಲಕರ ಮಾಲೀಕರ ಹಾಗೂ ವಾಹನ ಚಾಲಕರ ಸಂಘದ ಅಧ್ಯಕ್ಷ ಸಿ.ಕೆ. ಬೋಪಣ್ಣ ಇತರರು ಪಾಲ್ಗೊಳ್ಳಲಿದ್ದಾರೆ.