ಮಡಿಕೇರಿ, ಜ. 25: ನಗರದಲ್ಲಿ ಮೊದಲ ಸುತ್ತಿನ ಪಲ್ಸ್ ಪೋಲಿಯೋ ಉದ್ಘಾಟನಾ ಕಾರ್ಯಕ್ರಮವನ್ನು ತಾ. 28 ರಂದು ಬೆಳಿಗ್ಗೆ 8.30 ಗಂಟೆಗೆ ಹಿಲ್ ರಸ್ತೆ ಅಂಗನವಾಡಿ ಕೇಂದ್ರ, ಕನಕದಾಸ ರಸ್ತೆ, ಹಿಂದೂಸ್ಥಾನ್ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ. ಪಲ್ಸ್ ಪೋಲಿಯೋ ಕಾರ್ಯಕ್ರಮ ತಾ. 28 ರಿಂದ 31 ರವರೆಗೆ ಹಾಗೂ ಮಾರ್ಚ್ 11 ರಿಂದ ಮಾರ್ಚ್ 14 ರವರೆಗೆ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ತಿಳಿಸಿದ್ದಾರೆ.