ಶನಿವಾರಸಂತೆ: ನಿಡ್ತ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶಿಡಿಗಳಲೆ ಗ್ರಾಮದಲ್ಲಿ ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ ಅವರ ರೂ. 3 ಲಕ್ಷ ಅನುದಾನದಲ್ಲಿ ಸಮುದಾಯ ಭವನ ನಿರ್ಮಾಣ ಕಾಮಗಾರಿಗೆ ಗ್ರಾಮಸ್ಥರು ಭೂಮಿಪೂಜೆ ನೆರವೇರಿಸಿದರು.
ತಾಲೂಕು ಪಂಚಾಯಿತಿ ಸದಸ್ಯೆ ಲೀಲಾವತಿ, ನಿಡ್ತ ಗ್ರಾಮ ಪಂಚಾಯಿತಿ ಅಧ್ಯಕ್ಷ ಮುಸ್ತಫಾ, ಸದಸ್ಯ ಪುಟ್ಟಸ್ವಾಮಿ, ಯಶೋದಾ ಹಾಗೂ ಶಿಡಿಗಳಲೆ ಗ್ರಾಮಸ್ಥರು ಹಾಜರಿದ್ದರು.ಶ್ರೀಮಂಗಲ: ರಾಜ್ಯ ಸರ್ಕಾರದಿಂದ ಕೊಡಗು ಜಿಲ್ಲೆಯ ಅಭಿವೃದ್ಧಿಗೆ ಸಾಕಷ್ಟು ಅನುದಾನಗಳು ಬಂದಿದ್ದು, ವಿಶೇಷವಾಗಿ ಗ್ರಾಮೀಣ ಭಾಗದ ಜನರಿಗೆ ಸೌಲಭ್ಯ ಕಲ್ಪಿಸುವ ನಿಟ್ಟಿನಲ್ಲಿ ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ಪ್ರತಿ ಗ್ರಾ.ಪಂ. ವ್ಯಾಪ್ತಿಗೆ ಮುಖ್ಯಮಂತ್ರಿಗಳ ವಿಶೇಷ ಕೊಡಗು ಪ್ಯಾಕೇಜ್ ಮೂಲಕ ಅನುದಾನ ಬಿಡುಗಡೆಯಾಗಿದೆ ಎಂದು ಜಿ.ಪಂ. ಸದಸ್ಯ ಹಾಗೂ ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಮುಕ್ಕಾಟೀರ ಶಿವು ಮಾದಪ್ಪ ಹೇಳಿದರು.
ಅವರು ತಮ್ಮ ಕ್ಷೇತ್ರವಾದ ಟಿ. ಶೆಟ್ಟಿಗೇರಿ ಗ್ರಾ.ಪಂ. ವ್ಯಾಪ್ತಿಯಲ್ಲಿ, ರಾಜ್ಯ ಅರಣ್ಯ ಅಭಿವೃದ್ಧಿ ನಿಗಮದ ಉಪಾಧ್ಯಕ್ಷೆ ಮಾಂಗೇರ ಪದ್ಮಿನಿ ಪೊನ್ನಪ್ಪ, ಗ್ರಾ.ಪಂ. ಸದಸ್ಯ ಮುಕ್ಕಾಟೀರ ಸಂದೀಪ್ ಅವರೊಂದಿಗೆ ಮುಖ್ಯಮಂತ್ರಿ ಗ್ರಾಮೀಣ ರಸ್ತೆ ಅಭಿವೃದ್ಧಿ (ಸಿಎಂಆರ್‍ಜಿವೈ) ಅನುದಾನದ ರೂ. 38 ಲಕ್ಷ ವೆಚ್ಚದಲ್ಲಿ ಟಿ. ಶೆಟ್ಟಿಗೇರಿ-ತಾವಳಗೇರಿ-ಹರಿಹರ ಮುಖ್ಯ ರಸ್ತೆ ಡಾಂಬರೀಕರಣವನ್ನು ಜಂಟಿಯಾಗಿ ಉದ್ಘಾಟಿಸಿ ಮಾತನಾಡಿದರು.
ಈ ಸಂದರ್ಭ ರಾಜ್ಯ ಅರಣ್ಯ ಅಭಿವೃದ್ಧಿ ನಿಗಮದ ಉಪಾಧ್ಯಕ್ಷೆ ಮಾಂಗೇರ ಪದ್ಮಿನಿ ಪೊನ್ನಪ್ಪ ಮಾತನಾಡಿ, ಗ್ರಾಮಸ್ಥರು ತಮ್ಮ ವ್ಯಾಪ್ತಿಯ ಅಭಿವೃದ್ಧಿ ಕೆಲಸಗಳನ್ನು ಜನಪ್ರತಿನಿಧಿಗಳು ಮತ್ತು ಪಕ್ಷದ ಮುಖಂಡರ ಗಮನಕ್ಕೆ ತಂದು ಮಾಡಿಸಿಕೊಳ್ಳಲು ಮುಂದಾಗಬೇಕು. ಆದ್ಯತೆಯ ಮೂಲಕ ಕಾಮಗಾರಿಗಳಿಗೆ ಅನುದಾನ ಬಿಡುಗಡೆಯಾಗುತ್ತಿದೆ ಎಂದು ಹೇಳಿದರು.
ಇದಲ್ಲದೆ ಮುಖ್ಯಮಂತ್ರಿಗಳ ಕೊಡಗು ವಿಶೇಷ ಪ್ಯಾಕೇಜ್‍ನಡಿಯಲ್ಲಿ ರೂ. 5 ಲಕ್ಷ ವೆಚ್ಚದಲ್ಲಿ ಡಾಂಬರೀಕರಣವಾಗಿರುವ ಹರಿಹರ-ಕುಂದೂರು ರಸ್ತೆ ಉದ್ಘಾಟನೆ ಮಾಡಲಾಯಿತು. ಹರಿಹರ ಗ್ರಾಮದ ತೀತಿರ-ನಾಗವಂಡ ಕುಟುಂಬ ರಸ್ತೆ ಅಭಿವೃದ್ಧಿಗೆ ರೂ. 5 ಲಕ್ಷ, ಬೆಟ್ಟಚಿಕ್ಕಿ ದೇವಸ್ಥಾನ ರಸ್ತೆಗೆ ರೂ. 5 ಲಕ್ಷ, ಪೆಮ್ಮಣಮಾಡ-ತೀತಿರ ಕುಟುಂಬ ರಸ್ತೆಗೆ ರೂ. 5 ಲಕ್ಷÀದಲ್ಲಿ ರಸ್ತೆ ಅಭಿವೃದ್ಧಿಗೆ ಭೂಮಿ ಪೂಜೆ ಸಲ್ಲಿಸಲಾಯಿತು.
ಈ ಸಂದರ್ಭ ವಿಧಾನ ಪರಿಷತ್ ಮಾಜಿ ಸದಸ್ಯ ಚೆಪ್ಪುಡಿರ ಅರುಣ್ ಮಾಚಯ್ಯ, ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ, ಜಿ.ಪಂ. ಸದಸ್ಯರಾದ ಬಾನಂಡ ಪೃಥ್ಯು, ತಾ.ಪಂ. ಸದಸ್ಯರಾದ ಪಲ್ವಿನ್ ಪೂಣಚ್ಚ, ಆಶಾ ಜೇಮ್ಸ್, ಗ್ರಾ.ಪಂ. ಸದಸ್ಯ ಮುಕ್ಕಾಟಿರ ಸಂದೀಪ್ ಜಿಲ್ಲಾ ಕಾಂಗ್ರೆಸ್ ವಕ್ತಾರ ಟಾಟು ಮೊಣ್ಣಪ್ಪ, ಅಲ್ಪಸಂಖ್ಯಾತ ವಿಭಾಗದ ಬ್ಲಾಕ್ ಅಧ್ಯಕ್ಷ ಬಾಪು, ಪ್ರಧಾನ ಕಾರ್ಯದರ್ಶಿ ಕಾಡ್ಯಮಾಡ ಚೇತನ್, ಜಿಲ್ಲಾ ಕಾಂಗ್ರೆಸ್ ಹಿಂದುಳಿದ ವರ್ಗ ಅಧ್ಯಕ್ಷ ಸರ ಚಂಗಪ್ಪ, ಬ್ಲಾಕ್ ಕಾರ್ಯದರ್ಶಿ ಬಾಬು, ಹರಿಹರ ಕಾಂಗ್ರೆಸ್ ಬೂತ್ ಅಧ್ಯಕ್ಷ ಪೆಮ್ಮಣಮಾಡ ಮನು ತಮ್ಮಯ್ಯ, ಗೋಣಿಕೊಪ್ಪ ಕಾಂಗ್ರೆಸ್ ವಲಯ ಅಧ್ಯಕ್ಷ ಮಳವಂಡ ಅರವಿಂದ್ ಕುಟ್ಟಪ್ಪ, ಹಿರಿಯ ಕಾಂಗ್ರೆಸ್ ಮುಖಂಡರಾದ ಟಿಪ್ಪು ಬಿದ್ದಪ್ಪ, ಕಾಳಿಮಾಡ ಪ್ರಶಾಂತ್, ಅಪ್ಪಂಚಂಗಡ ಮೋಟಯ್ಯ, ಚೊಟ್ಟೆಯಂಡಮಾಡ ದಿನೇಶ್, ತೀತಿರ ಪ್ರಭು, ಗ್ರಾ.ಪಂ. ಸದಸ್ಯ ಚೊಟ್ಟೆಯಂಡಮಾಡ ಉದಯ, ವಲಯ ಯುವ ಕಾಂಗ್ರೆಸ್ ಅಧ್ಯಕ್ಷ ಮಾಣೀರ ಮಂಜು, ನಿವೃತ್ತ ಪ್ರಾಂಶುಪಾಲರಾದ ಬಾಚೀರ ಕಾಶಿ, ನಾಗವಂಡ ಜಯ, ಕಳ್ಳೇಂಗಡ ಸಚಿನ್ ಹಾಗೂ ಕಾರ್ಯಕರ್ತರು ಹಾಜರಿದ್ದರು.ಶನಿವಾರಸಂತೆ: ಸಮೀಪದ ಬ್ಯಾಡಗೊಟ್ಟ ಗ್ರಾಮದ ಹಿರಿಯ ಪ್ರಾಥಮಿಕ ಶಾಲೆಗೆ ಉದ್ಯೋಗ ಖಾತ್ರಿ (ನರೇಗ) ಯೋಜನೆಯಡಿ ಅನುದಾನ ರೂ. 2.5 ಲಕ್ಷ ವೆಚ್ಚದಲ್ಲಿ ತಡೆಗೋಡೆ ನಿರ್ಮಾಣ ಕಾಮಗಾರಿಗಾಗಿ ಗ್ರಾಮ ಪಂಚಾಯಿತಿ ಅಧ್ಯಕ್ಷೆ ನಿರ್ಮಲಾ ಸುಂದರ್ ಭೂಮಿಪೂಜೆ ನೆರವೇರಿಸಿದರು.
ಈ ಸಂದರ್ಭ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷೆ ರಾಣಿ, ಗ್ರಾಮದ ಪ್ರಮುಖರಾದ ಬಿ.ಎಂ. ಮಹಮ್ಮದ್, ಎ.ಸಿ. ನಾಗರಾಜ್, ಬಸವರಾಜ್, ಮಹಮ್ಮದ್, ಕೆ.ಎ. ಹಮೀದ್, ಬಿ.ಐ. ಮಹಮ್ಮದ್, ಕೆ.ಎಂ. ಇಸಾಕ್, ಪಿ.ಪಿ. ಮಹಮ್ಮದ್ ಹಾಜರಿದ್ದರು.