ಮಡಿಕೇರಿ, ಜ. 24: ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಗೋಣಿಕೊಪ್ಪಲು ಶಾಖೆ ವತಿ ಯಿಂದ ಗೋಣಿ ಕೊಪ್ಪಲು ಕಾವೇರಿ ಕಾಲೇಜಿ ನಲ್ಲಿ ಸ್ವಾಮಿ ವಿವೇಕಾನಂದ ಜಯಂತಿಯನ್ನು ಆಚರಿಸಲಾಯಿತು. ಮುಖ್ಯ ಅತಿಥಿಗಳಾಗಿ ಎ.ಬಿ.ವಿ.ಪಿ. ರಾಜ್ಯ ಉಪಾಧ್ಯಕ್ಷ ಮಂಗಳೂರಿನ ನಾರಾಯಣ ಗುರು ಕಾಲೇಜಿನ ಉಪನ್ಯಾಸಕ ಕೇಶವ ಬಂಗೇರ ವಿದ್ಯಾರ್ಥಿಗಳಿಗೆ ಸ್ವಾಮಿ ವಿವೇಕಾನಂದರ ಆದರ್ಶಗಳ ಬಗ್ಗೆ ತಿಳಿಸಿಕೊಟ್ಟರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಪ್ರೊ. ಪಿ.ಎ. ಪೂವಣ್ಣ ವಹಿಸಿದ್ದರು. ಕಾರ್ಯಕ್ರಮದಲ್ಲಿ ಕಾಲೇಜಿನ ಉಪನ್ಯಾಸಕರಾದ ಭಾರತಿ ಹಾಗೂ ಅಕ್ಕಮ್ಮ ಉಪಸ್ಥಿತರಿದ್ದರು.