ಕುಶಾಲನಗರ, ಜ. 26: ಬಸವನಹಳ್ಳಿ ಪುನರ್ವಸತಿ ಕೇಂದ್ರದ ಕಾಮಗಾರಿ ಫೆಬ್ರವರಿ ತಿಂಗಳಲ್ಲಿ ಪೂರ್ಣಗೊಳ್ಳಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಂ.ಆರ್.ಸೀತಾರಾಂ ತಿಳಿಸಿದ್ದಾರೆ.
ಮಡಿಕೇರಿಯಿಂದ ಕುಶಾಲನಗರ ಕಡೆಗೆ ತೆರಳುತ್ತಿದ್ದ ಸಂದರ್ಭ ಅಧಿಕಾರಿಗಳು, ಜನಪ್ರತಿನಿಧಿ ಗಳೊಂದಿಗೆ ಕೇಂದ್ರಕ್ಕೆ ಭೇಟಿ ನೀಡಿ ನಿರ್ಮಾಣವಾಗುತ್ತಿರುವ ಮನೆಗಳ ಪರಿಶೀಲನೆ ನಡೆಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು. ಶಿಬಿರದ ಜನರಿಗೆ ಎಲ್ಲಾ ರೀತಿಯ ಮೂಲಭೂತ ವ್ಯವಸ್ಥೆಗಳನ್ನು ಕಲ್ಪಿಸುವದರೊಂದಿಗೆ ಗುಣಮಟ್ಟದಲ್ಲಿ ಮನೆ ನಿರ್ಮಾಣ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿ.ಪಂ. ಸದಸ್ಯೆ ಕುಮುದಾ ಧರ್ಮಪ್ಪ, ಅಲ್ಪಸಂಖ್ಯಾತ ರಾಜ್ಯ ಘಟಕದ ಮುಖಂಡ ಪಿ.ಸಿ.ಹಸೈನಾರ್ ಮತ್ತು ಅಧಿಕಾರಿಗಳು ಇದ್ದರು.