ಮಡಿಕೇರಿ, ಜ. 26: ಶ್ರೀವೀರಭದ್ರ ಮುನೇಶ್ವರ ದೇವಾಲಯ ಸಮಿತಿ ಮತ್ತು ಮಡಿವಾಳರ ಅಭಿವೃದ್ಧಿ ಸಂಘದ ಸಹಭಾಗಿತ್ವದಲ್ಲಿ ಫೆ.13 ರಂದು ನಗರದ ಶ್ರೀವೀರಭದ್ರ ಮುನೇಶ್ವರ ದೇವಾಲಯದ ಪುನರ್ ಪ್ರತಿಷ್ಠಾಪನಾ ವಾರ್ಷಿಕೋತ್ಸವ ಹಾಗೂ ಶಿವರಾತ್ರಿ ಪ್ರಯುಕ್ತ ಮಹಾ ಮೃತ್ಯುಂಜಯ ಹೋಮ ನಡೆಯಲಿದೆ.

ಸುದ್ದಿಗೋಷ್ಠಿಯಲ್ಲಿ ದೇವಾಲಯ ಸಮಿತಿಯ ಗೌರವಾಧ್ಯಕ್ಷ ಪಿ.ಜಿ. ಮಂಜುನಾಥ್ ಧಾರ್ಮಿಕ ವಿಧಿ ವಿಧಾನಗಳ ಕುರಿತು ಮಾಹಿತಿ ನೀಡಿದರು. ಫೆ.13 ರಂದು ಬೆಳಗ್ಗೆ 7 ಗಂಟೆಗೆ ಮಹಾಗಣಪತಿ ಹೋಮ ನಡೆಯಲಿದ್ದು, ಬೆಳಿಗ್ಗೆ 9 ಗಂಟೆಗೆ ಶ್ರೀ ವೀರಭದ್ರ ಉತ್ಸವ ಮೂರ್ತಿಯ ಶೋಭಾಯಾತ್ರೆ ನಗರದ ಗಣಪತಿ ಬೀದಿ, ಬನ್ನಿ ಮಂಟಪ, ಮಹದೇವಪೇಟೆ ಸೇರಿದಂತೆ ಖಾಸಗಿ ಬಸ್ ನಿಲ್ದಾಣ ವೃತ್ತದಿಂದ ಜೂನಿಯರ್ ಕಾಲೇಜು ರಸ್ತೆಗಾಗಿ ತೆರಳಲಿದೆ. ಅಂದು ಮಧ್ಯಾಹ್ನ 12 ಗಂಟೆಗೆ ಮಹಾ ಮಂಗಳಾರತಿ, 1 ಗಂಟೆಗೆ ಅನ್ನ ಸಂತರ್ಪಣೆ, ಸಂಜೆ ಸಾಮೂಹಿಕ ಪ್ರಾರ್ಥನೆ ಹಾಗೂ ಸಂಕಲ್ಪ ಸೇರಿದಂತೆ ಗೋ ಪೂಜೆ, ಮಹಾ ಮೃತ್ಯುಂಜಯ ಹೋಮ, ಏಕಾದಶ ರುದ್ರಾಭಿಷೇಕ ನಡೆಯಲಿದೆ. ರಾತ್ರಿ 10 ಗಂಟೆಗೆ ಸಭಾ ಕಾರ್ಯಕ್ರಮ ಮತ್ತು 10.30 ಕ್ಕೆ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ ಎಂದು ಮಂಜುನಾಥ್ ತಿಳಿಸಿದರು.

ಮಹಾಮೃತ್ಯುಂಜಯ ಹೋಮದ ಸಂದರ್ಭ ಶಕ್ತಿ ದಿನಪತ್ರಿಕೆಯ ಉಪಸಂಪಾದಕ ಶಶಿಸೋಮಯ್ಯ ಅವರ ಆರೋಗ್ಯದ ಸುಧಾರಣೆಗೂ ವಿಶೇಷ ಪ್ರಾರ್ಥನೆ ಸಲ್ಲಿಸಲಾಗುವದು.

ಹೆಚ್ಚಿನ ಮಾಹಿತಿಗಾಗಿ 9343819138, 8792432414, 8904224240 ಸಂಖ್ಯೆಗಳನ್ನು ಸಂಪರ್ಕಿಸಬಹುದಾಗಿದೆ ಎಂದರು.

ಸುದ್ದಿಗೋಷ್ಟಿಯಲ್ಲಿ ದೇವಾಲಯ ಸಮಿತಿಯ ಅಧ್ಯಕ್ಷ ಪಿ.ಜಿ. ಸುಕುಮಾರ್, ಉಪಾಧ್ಯಕ್ಷ ಎಂ.ಎಲ್.ಸತೀಶ್, ಪ್ರಧಾನ ಕಾರ್ಯದರ್ಶಿ ಕೆ.ಕಿಶೋರ್, ಸಹಕಾರ್ಯದರ್ಶಿ ವಿಷ್ಣು ಹಾಗೂ ಖಜಾಂಚಿ ಎ.ಬಿ.ಅರುಣ್ ಉಪಸ್ಥಿತರಿದ್ದರು.