ಮಡಿಕೇರಿ, ಜ. 26: ವ್ಯಕ್ತಿಯೋರ್ವರು ನಾಪತ್ತೆಯಾಗಿರುವ ಬಗ್ಗೆ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಮದೆ ಗ್ರಾಮದ ಎನ್.ಎಸ್. ಚಿದಾನಂದ ಎಂಬವರು ಮೂರು ದಿನಗಳ ಹಿಂದೆ ಮನೆಯಿಂದ ತೆರಳಿದವರು ಹಿಂದಿರುಗಿ ಬಂದಿಲ್ಲ. ಪತ್ತೆ ಮಾಡಿಕೊಡುವಂತೆ ಪತ್ನಿ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.