ಮಡಿಕೇರಿ, ಜ. 26 : ಕೇಂದ್ರ ಸರಕಾರದ ದಂದ್ವ ಆರ್ಥಿಕ ನೀತಿಯಿಂದಾಗಿ ತೈಲೋತ್ಪನ್ನ ಹಾಗೂ ಅಗತ್ಯ ವಸ್ತುಗಳ ಬೆಲೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ ಎಂದು ಆರೋಪಿಸಿರುವ ನಗರ ಕಾಂಗ್ರೆಸ್ ಸಮಿತಿ ಕೇಂದ್ರದ ವಿರುದ್ಧ ತಾ. 31 ರಂದು ಪ್ರತಿಭಟನೆ ನಡೆಸಲು ನಿರ್ಧರಿಸಿದೆ.
ನಗರ ಕಾಂಗ್ರೆಸ್ ಸಮಿತಿ ಸಭೆ ಪಕ್ಷದ ನಗರಾಧ್ಯಕ್ಷ ಕೆ.ಯು. ಅಬ್ದುಲ್ ರಜಾóಕ್ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಕಾಂಗ್ರೆಸ್ ಕಛೇರಿಯಲ್ಲಿ ನಡೆಯಿತು. ಕೆಪಿಸಿಸಿ ಕಾರ್ಯದರ್ಶಿಗಳು ಹಾಗೂ ಕೊಡಗು ಉಸ್ತುವಾರಿ ವೀಕ್ಷಕ ವೆಂಕಪ್ಪಗೌಡ ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿರುವದರಿಂದ ಕಾರ್ಯಕರ್ತರು ಒಗ್ಗೂಡಿ ಜಿಲ್ಲೆಯ ಎರಡೂ ಕ್ಷೇತ್ರಗಳ ಗೆಲುವಿಗೆ ಶ್ರಮಿಸಬೇಕೆಂದರು.
ನಗರ ಕಾಂಗ್ರೆಸ್ ಅಧ್ಯಕ್ಷ ಕೆ.ಯು.ಅಬ್ದುಲ್ ರಜಾóಕ್ ಮಾತನಾಡಿ, ಬಡವರ ಹಸಿವು ನೀಗಿಸುವದಕ್ಕಾಗಿ ಸರಕಾರ ನಗರದಲ್ಲಿ ಇಂದಿರಾ ಕ್ಯಾಂಟೀನ್‍ನ್ನು ಆರಂಭಿಸಲು ಮುಂದಾಗಿದ್ದು, ಕಾಮಗಾರಿಯನ್ನು ಚುರುಕುಗೊಳಿಸುವ ಬಗ್ಗೆ ಎಲ್ಲರೂ ಕಾಳಜಿ ವಹಿಸಬೇಕೆಂದರು. ಕೇಂದ್ರ ಸರಕಾರದ ಬೆಲೆ ಏರಿಕೆ ನೀತಿಯನ್ನು ಖಂಡಿಸಿ ತಾ. 31 ರಂದು ನಗರದ ಮುಖ್ಯ ಬೀದಿಗಳಲ್ಲಿ ಪ್ರತಿಭಟನಾ ಮೆರವಣಿಗೆ ಮತ್ತು ಜನರಲ್ ತಿಮ್ಮಯ್ಯ ವೃತ್ತದಲ್ಲಿ ರಸ್ತೆ ತಡೆ ಪ್ರತಿಭಟನೆ ನಡೆಸಲಾಗುವದೆಂದರು.
ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರವೀಂದ್ರ ಅಪ್ರು ಹಾಗೂ ಪ್ರಮುಖ ಜಾನ್ಸನ್ ಪಿಂಟೋ ಮಾತನಾಡಿ, ಬೂತ್ ಮಟ್ಟದಲ್ಲಿ ಪಕ್ಷ ಬಲಗೊಳ್ಳುತ್ತಿರುವ ಬಗ್ಗೆ ಮಾಹಿತಿ
ಕೆ.ಯು.ಅಬ್ದುಲ್ ರಜಾóಕ್ ಮಾತನಾಡಿ, ಬಡವರ ಹಸಿವು ನೀಗಿಸುವದಕ್ಕಾಗಿ ಸರಕಾರ ನಗರದಲ್ಲಿ ಇಂದಿರಾ ಕ್ಯಾಂಟೀನ್‍ನ್ನು ಆರಂಭಿಸಲು ಮುಂದಾಗಿದ್ದು, ಕಾಮಗಾರಿಯನ್ನು ಚುರುಕುಗೊಳಿಸುವ ಬಗ್ಗೆ ಎಲ್ಲರೂ ಕಾಳಜಿ ವಹಿಸಬೇಕೆಂದರು. ಕೇಂದ್ರ ಸರಕಾರದ ಬೆಲೆ ಏರಿಕೆ ನೀತಿಯನ್ನು ಖಂಡಿಸಿ ತಾ. 31 ರಂದು ನಗರದ ಮುಖ್ಯ ಬೀದಿಗಳಲ್ಲಿ ಪ್ರತಿಭಟನಾ ಮೆರವಣಿಗೆ ಮತ್ತು ಜನರಲ್ ತಿಮ್ಮಯ್ಯ ವೃತ್ತದಲ್ಲಿ ರಸ್ತೆ ತಡೆ ಪ್ರತಿಭಟನೆ ನಡೆಸಲಾಗುವದೆಂದರು.
ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರವೀಂದ್ರ ಅಪ್ರು ಹಾಗೂ ಪ್ರಮುಖ ಜಾನ್ಸನ್ ಪಿಂಟೋ ಮಾತನಾಡಿ, ಬೂತ್ ಮಟ್ಟದಲ್ಲಿ ಪಕ್ಷ ಬಲಗೊಳ್ಳುತ್ತಿರುವ ಬಗ್ಗೆ ಮಾಹಿತಿ