ಸೋಮವಾರಪೇಟೆ, ಜ. 26: ವೀರ ಸನ್ಯಾಸಿ ಸ್ವಾಮಿ ವಿವೇಕಾನಂದರ ಆದರ್ಶ ಗಳನ್ನು ಜೀವನ ದಲ್ಲಿ ಅಳವಡಿಸಿ ಕೊಂಡರೆ ಯಶಸ್ಸು ಸಾಧ್ಯ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಮುಂದುವರೆಯ ಬೇಕೆಂದು ಸ್ವಾಮಿ ವಿವೇಕಾನಂದ ಜಯಂತ್ಯೋತ್ಸವ ಸಮಿತಿ ಅಧ್ಯಕ್ಷ ಬಿ.ಎಸ್. ಸದಾನಂದ್ ಹೇಳಿದರು. ತಾ. 31 ರಂದು ಸೋಮವಾರಪೇಟೆಯಲ್ಲಿ ಆಯೋಜಿಸಲಾಗಿರುವ ವಿವೇಕಾನಂದರ 155ನೇ ಜನ್ಮದಿನೋತ್ಸವ ಕಾರ್ಯಕ್ರಮದ ಅಂಗವಾಗಿ ಇಲ್ಲಿನ ಮಾನಸ ಸಭಾಂಗಣದಲ್ಲಿ, ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ವಿವಿಧ ಸ್ಪರ್ಧಾ ಕಾರ್ಯಕ್ರಮಗಳ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ವಿದ್ಯಾರ್ಥಿ ದಿಸೆಯಲ್ಲಿಯೇ ವಿವೇಕಾನಂದರ ಆದರ್ಶಗಳನ್ನು ಪಾಲಿಸಿದರೆ ಭವಿಷ್ಯದಲ್ಲಿ ಯಶಸ್ಸು ತಮ್ಮದಾಗಲಿದೆ ಎಂದರು. ಕಾರ್ಯಕ್ರಮಕ್ಕೆ ಮಾನಸ ಸಭಾಂಗಣದ ಮಾಲೀಕ ರಾದ ಬಿ.ಎಸ್. ಶ್ರೀಧರ್ ಚಾಲನೆ ನೀಡಿದರು. ವೇದಿಕೆಯಲ್ಲಿ ಸಮಿತಿಯ ಕಾರ್ಯದರ್ಶಿ ಎಸ್. ಮಹೇಶ್, ಖಜಾಂಚಿ ಮೃತ್ಯುಂಜಯ, ವಿವೇಕಾ ನಂದ ಯುವ ಬ್ರಿಗೇಡ್‍ನ ಸಂಚಾಲಕ ಅಭಿಷೇಕ್, ರೋಟರಿ ಮಾಜಿ ಅಧ್ಯಕ್ಷ ಎ.ಪಿ. ವೀರರಾಜು, ರೊಟೇರಿಯನ್‍ಗಳಾದ ರಾಜ್‍ಶ್ರೀ ಸದಾನಂದ್, ಆಶಾ ವೀರರಾಜು ಅವರುಗಳು ಉಪಸ್ಥಿತರಿದ್ದರು. ಪ್ರಾಥಮಿಕ ಶಾಲಾ ವಿಭಾಗದ ವಿದ್ಯಾರ್ಥಿಗಳಿಗೆ ಪ್ರಕೃತಿ ಹಾಗೂ ಸ್ವಾಮಿ ವಿವೇಕಾನಂದರ ಚಿತ್ರ ಬಿಡಿಸುವ ಸ್ಪರ್ಧೆ, ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ವಿವೇಕಾನಂದ ಬಗ್ಗೆ ಪ್ರಬಂಧ ಸ್ಪರ್ಧೆ ಹಾಗೂ ಕಾಲೇಜು ವಿದ್ಯಾರ್ಥಿಗಳಿಗೆ ರಸಪ್ರಶ್ನೆ ಸ್ಪರ್ಧೆಗಳನ್ನು ಆಯೋಜಿಸಲಾಗಿತ್ತು. ರಸಪ್ರಶ್ನೆ ಸ್ಪರ್ಧೆಯನ್ನು ವಿವೇಕಾನಂದ ಯುವ ಬ್ರಿಗೇಡ್‍ನ ಸದಸ್ಯರು ನಿರ್ವಹಿಸಿದರು. ತಾ. 31ರಂದು ಮಾನಸ ಸಭಾಂಗಣದಲ್ಲಿ ನಡೆಯುವ ವಿವೇಕಾನಂದರ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಿಸಲಾಗುವದು ಎಂದು ಸಮಿತಿಯ ಅಧ್ಯಕ್ಷ ಸದಾನಂದ್ ತಿಳಿಸಿದರು.