ಸಿದ್ದಾಪುರ, ಜ. 27: ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯ ಹೋರಾಟ ಗಾರರ ಹಾಗೂ ಮುಖ್ಯಮಂತ್ರಿ ಸಿದ್ದಾರಾಮಯ್ಯ ಅವರ ನೇತೃತ್ವದ ವಿವಿಧ ಸಚಿವರುಗಳ ಮತ್ತು ಉನ್ನತ ಅಧಿಕಾರಿಗಳ ಸಭೆ ಬೆಂಗಳೂರಿನ ಮುಖ್ಯಮಂತ್ರಿಗಳ ವಸತಿ ಕೃಷ್ಣಾದಲ್ಲಿ ನಡೆಯಿತು.ಭೂಮಿ ಸಮಸ್ಯೆಗೆ ಸಂಬಂಧಿಸಿ ದಂತೆ ವಿವಿಧ ಇಲಾಖೆಗಳ ಉನ್ನತ ಅಧಿಕಾರಿಗಳನ್ನು ಮತ್ತು ಹೋರಾಟ ಗಾರರನ್ನು ಒಳಗೊಂಡ ಸಮಿತಿಯನ್ನು ರಚಿಸಲು ಮತ್ತು ಫೆಬ್ರವರಿ ಮೊದಲ ವಾರದಲ್ಲಿ ಸಮಿತಿಯ ಸಭೆ ಕರೆಯಲು ತೀರ್ಮಾನಿಸಲಾಯಿತು.
94 ಛಿ ಮತ್ತು ಛಿಛಿ ಯಲ್ಲಿ ಅರ್ಜಿ ಸಲ್ಲಿಸಿರುವದರಲ್ಲಿ ಹಲವು ಅರ್ಜಿಗಳು ತಿರಸ್ಕೃತವಾಗಿರುವದರಿಂದ ಮತ್ತೊಮ್ಮೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗುವದು. ಸರಕಾರಿ ಜಾಗದಲ್ಲಿ ಮನೆ ನಿರ್ಮಿಸಿ
(ಮೊದಲ ಪುಟದಿಂದ) ವಾಸವಾಗಿರುವವರನ್ನು ಯಾವದೇ ಕಾರಣಕ್ಕೂ ಒಕ್ಕಲೆಬ್ಬಿಸಬಾರದು.
ಪಾಲೇಮಾಡಿನ ಸ್ಮಶಾನ ಜಾಗವನ್ನು ಹೊರತು ಪಡಿಸಿ ಉಳಿದ ಜಾಗದಲ್ಲಿ ಕ್ರಿಕೆಟ್ ಸ್ಟೇಡಿಯಂ ನಿರ್ಮಿಸುವಂತೆ ಮುಖ್ಯಮಂತ್ರಿಗಳು ಜಿಲ್ಲಾಧಿಕಾರಿಗಳಿಗೆ ಸೂಚಿಸಿದರು.
ಭೂಮಿ ಮತ್ತು ವಸತಿಯ ವಿಚಾರವಾಗಿ ಹೋರಾಟಗಾರರ ಮೇಲೆ ದಾಖಲಾಗಿರುವ ಪ್ರಕರಣಗಳನ್ನು ಕೈ ಬಿಡುವ ಭರವಸೆ ನೀಡಿದರು.
ಸಭೆಯಲ್ಲಿ ಕಂದಾಯ ಸಚಿವ ಕಾಗೋಡು ತಿಮ್ಮಪ್ಪ, ವಸತಿ ಸಚಿವ ಕೃಷ್ಣಪ್ಪ, ಲೋಕೋಪಯೋಗಿ ಸಚಿವ ಮಹದೇವಪ್ಪ ಹಾಗೂ ಸರಕಾರದ ಉನ್ನತ ಮಟ್ಟದ ಬಹುತೇಕ ಅಧಿಕಾರಿಗಳು ಉಪಸ್ಥಿತರಿದ್ದರು.
ಹೋರಾಟಗಾರರ ಪರವಾಗಿ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಹೆಚ್.ಎಸ್ ದೊರೆಸ್ವಾಮಿ ನೇತೃತ್ವದಲ್ಲಿ ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿಯ ಸಿರಿಮನೆ ನಾಗರಾಜ್, ನೂರ್ ಶ್ರೀಧರ್, ಅಮೀನ್ ಮೊಹಿಸಿನ್, ವಿಜಯಮ್ಮ, ಪೂಜಾರ, ಕೃಷ್ಣಪ್ಪ, ಕಂದೇಕಾಲ ಶ್ರೀನಿವಾಸ್ ಸೇರಿದಂತೆ ಇನ್ನಿತರರು ಇದ್ದರು.
ಒಟ್ಟಿನಲ್ಲಿ ಕಳೆದ 18 ದಿನಗಳಿಂದ ಬೆಂಗಳೂರಿನ ಗಾಂಧಿ ಭವನದ ಪಕ್ಕದಲ್ಲಿನ ವಲ್ಲಭ ನಿಕೇತನದಲ್ಲಿ ನಡೆಯುತ್ತಿದ್ದ ಧರಣಿ ಸತ್ಯಾಗ್ರಹದ ವಿಜಯಾಘೋಷ ತಾ.28ರಂದು (ಇಂದು) ನಡೆಯಲಿದ್ದು, ದಲಿತ ನಾಯಕ ಹಾಗೂ ಗುಜರಾತಿನ ಶಾಸಕ ಜಿಗ್ನೇಶ್ ಮೇವಾನಿ ಆಗಮಿಸಲಿದ್ದಾರೆ ಎಂದು ಹೋರಾಟ ಸಮಿತಿ ತಿಳಿಸಿದೆ. -ವಾಸು ಆಚಾರ್ಯ